ಓವರ್‌ಹೆಡ್ ಟ್ಯಾಂಕ್‌ ಕುಸಿದು ಬಿದ್ದು ಇಬ್ಬರು ಮಹಿಳೆಯರು ಮೃತ, 11 ಮಂದಿ ಗಾಯ

Prasthutha|

ಮಥುರಾ: ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಕೃಷ್ಣ ವಿಹಾರ್ ಕಾಲೋನಿಯಲ್ಲಿ ಓವರ್‌ಹೆಡ್ ಟ್ಯಾಂಕ್‌ ಕುಸಿದು ಬಿದ್ದು ಇಬ್ಬರು ಮಹಿಳೆಯರು ಮೃತಪಟ್ಟಿದ್ದು, 11 ಮಂದಿ ಗಾಯಗೊಂಡ ಘಟನೆ ನಡೆದಿದೆ.

- Advertisement -

ಭಾನುವಾರ ಸಂಜೆ ಘಟನೆ ಸಂಭವಿಸಿದೆ. ಸುಂದರಿ (65) ಮತ್ತು ಸರಿತಾ (27) ಮೃತರು.

ಐವರು ಮಹಿಳೆಯರು ಸೇರಿದಂತೆ ಇತರ ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಗ್ರಾದ ಎಸ್‌ಎನ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಜಿಲ್ಲಾಧಿಕಾರಿ ಶೈಲೇಂದ್ರ ಕುಮಾರ್ ಸಿಂಗ್ ತಿಳಿಸಿದ್ದಾರೆ.

- Advertisement -

ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) ಸಿಬ್ಬಂದಿ ಧಾವಿಸಿದ್ದರು ಎಂದು ಶೈಲೇಂದ್ರ ಕುಮಾರ್ ಹೇಳಿದ್ದಾರೆ.

2021ರಲ್ಲಿ ಜಲ ನಿಗಮವು ಗಂಗಾಜಲ ಕುಡಿಯುವ ನೀರು ಯೋಜನೆಯಡಿ ₹6 ಕೋಟಿ ವೆಚ್ಚದಲ್ಲಿ ನೀರಿನ ಟ್ಯಾಂಕ್ ಅನ್ನು ನಿರ್ಮಾಣ ಮಾಡಿತ್ತು. ಕೇವಲ ಮೂರೇ ವರ್ಷಗಳಲ್ಲಿ ಕುಸಿದು ಬಿದ್ದಿದೆ.‌ ಘಟನೆ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.



Join Whatsapp