ಅಹಮದಾಬಾದ್: ಲೋಕಸಭೆಯಲ್ಲಿ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆ ವಿರುದ್ಧ ಗುಜರಾತ್ನ ಕಾಂಗ್ರೆಸ್ ಪಕ್ಷದ ಕಚೇರಿಯನ್ನು ಗುರಿಯಾಗಿರಿಸಿಕೊಂಡು ವಿಹೆಚ್ ಪಿ ಹಾಗೂ ಬಜರಂಗ ದಳ ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.
ಕಾಂಗ್ರೆಸ್ ಕಚೇರಿ ಇದ್ದ ಕಟ್ಟಡದ ಕಾವಲುಗಾರನ ಗರ್ಭಿಣಿ ಮಗಳ ಮೇಲೆ ಸಂಘಪರಿವಾರ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.
ಜೈ ಶ್ರೀರಾಮ್ ಘೋಷಣೆ ಕೂಗಿದ ಪ್ರತಿಭಟನಾ ನಿರತರು ರಾಹುಲ್ ಗಾಂಧಿ ಪೋಸ್ಟರ್, ಫೋಟೋಗಳ ಮೇಲೆ ಕಪ್ಪು ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದರು. ಈ ಪ್ರತಿಭಟನೆ ವೇಳೆ ಕಚೇರಿ ಕಟ್ಟಡದ ಕಾವಲುಗಾರನ ಗರ್ಭಿಣಿ ಮಗಳ ಮೇಲೂ ದಾಳಿಕೋರರು ಹಲ್ಲೆ ನಡೆಸಿದ್ದಾರೆ. ದಾಳಿಯ ಸಂದರ್ಭದಲ್ಲಿ ಕಾಂಗ್ರೆಸ್ ಕಟ್ಟಡದ ವಾಚ್ಮ್ಯಾನ್ ಇದ್ದರು ಮತ್ತು ಅವರ ಗರ್ಭಿಣಿ ಮಗಳ ಮೇಲೂ ಈ ಗೂಂಡಾಗಳು ಹಲ್ಲೆ ನಡೆಸಿದ್ದಾರೆ. ಅಂತಹವರನ್ನು ಹಿಂದೂಗಳೆಂದು ಎಂದಿಗೂ ಕರೆಯಲು ಸಾಧ್ಯವಿಲ್ಲ. ಈ ಅಂಶಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ನಾವು ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್ ನಾಯಕ ಅಮಿತ್ ಚಾವ್ಡಾ ಹೇಳಿದ್ದಾರೆ.