ವಾರ್ತಾ ಇಲಾಖೆ ಆಯುಕ್ತರಾಗಿ ಮತ್ತೆ ಹೇಮಂತ್ ನಿಂಬಾಳ್ಕರ್ ಅಧಿಕಾರ ಸ್ವೀಕಾರ

Prasthutha|

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಹೇಮಂತ್ ಎಂ. ನಿಂಬಾಳ್ಕರ್ ಮಂಗಳವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಆಯುಕ್ತ ವಿಕಾಸ್ ಕಿಶೋರ್ ಸುರಳ್ಕರ್, ನಿಂಬಾಳ್ಕರ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

- Advertisement -


ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿಗೆ ಮುನ್ನ ಹೇಮಂತ್ ನಿಂಬಾಳ್ಕರ್ ಇಲಾಖೆಯ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು. ಆದರೆ, ಅವರ ಪತ್ನಿ ಅಂಜಲಿ ನಿಂಬಾಳ್ಕರ್ ಅವರು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರಿಂದ ಇವರನ್ನು ಬೇರೆ ಇಲಾಖೆಗೆ ವರ್ಗಾವಣೆ ಮಾಡುವಂತೆ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿತ್ತು. ಈ ಹಿನ್ನೆಲೆಯಲ್ಲಿ ವಿಕಾಸ್ ಕಿಶೋರ್ ಸುರಳ್ಕರ್ ಅವರನ್ನು ಆಯುಕ್ತರನ್ನಾಗಿ ನೇಮಿಸಲಾಗಿತ್ತು. ಆದರೆ, ಹೇಮಂತ್ಗೆ ಕಳೆದ 3 ತಿಂಗಳಿಂದ ಯಾವುದೇ ಹುದ್ದೆ ಇರಲಿಲ್ಲ. ವಿಕಾಸ್ ಕಿಶೋರ್ ಸುರಳ್ಕರ್ ಅವರನ್ನು ಬಿಬಿಎಂಪಿ ಆರೋಗ್ಯ ಶಾಖೆ ವಿಶೇಷ ಆಯುಕ್ತರನ್ನಾಗಿ ಮುಂದುವರಿಸಲಾಗಿದೆ.



Join Whatsapp