ಸಿಎಂ ಮನೆಗೆ ಬಿಜೆಪಿ ಮುತ್ತಿಗೆ ಯತ್ನ: ವಿಜಯೇಂದ್ರ, ಅಶೋಕ್ ವಶಕ್ಕೆ

Prasthutha|

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಸಂಬಂಧ ಮುಖ್ಯಮಂತ್ರಿ ರಾಜೀನಾಮೆಗೆ ಆಗ್ರಹಿಸಿ ಮತ್ತು ಮೈಸೂರಿನ ಮೂಡಾ ಅವ್ಯವಹಾರ ಖಂಡಿಸಿ ಸಿಎಂ ಮನೆಗೆ ಮುತ್ತಿಗೆ ಹಾಕಲು ಕುಮಾರಕೃಪಾ ವಸತಿ ಗೃಹದಿಂದ ಹೊರಟ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಹಲವು ಜನಪ್ರತಿನಿಧಿಗಳನ್ನು ಪೊಲೀಸರು ವಶಕ್ಕೆ ಪಡೆದರು.

- Advertisement -

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ನೇತೃತ್ವದಲ್ಲಿ ಬೆಳಿಗ್ಗೆ ಕುಮಾರಕೃಪಾ ವಸತಿಗೃಹದಿಂದ ಕಾಲ್ನಡಿಗೆ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮನೆಗೆ ಮುತ್ತಿಗೆ ಹಾಕಲು ಹೊರಟರು.


ಕುಮಾರಕೃಪಾ ವಸತಿಗೃಹದಿಂದ ಹೊರಟ ಬಿಜೆಪಿ ನಾಯಕರನ್ನು ಪೊಲೀಸರು ಮಾರ್ಗದಲ್ಲೇ ತಡೆದು, ಬಂಧಿಸಿ ಕರೆದೊಯ್ದರು.



Join Whatsapp