ಶಿವಾನ್: ಬಿಹಾರದ ಶಿವಾನ್ ಜಿಲ್ಲೆಯಲ್ಲಿ ಗಂದಕಿ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆ ಬುಧವಾರ ಬೆಳಿಗ್ಗೆ ಕುಸಿಯುವ ಮೂಲಕ ರಾಜ್ಯದಲ್ಲಿ ಕಳೆದ 15 ದಿನಗಳಲ್ಲಿ ಇಂಥ ದುರ್ಘಟನೆಗಳ ಏಳು ಪ್ರಕರಣಗಳು ದಾಖಲಾಗಿವೆ.
ಇದೊಂದು ಕಿರು ಸೇತುವೆಯಾಗಿದೆ. ಮಹರಾಜ್ಗಂಜ್ನ ಸುತ್ತಮುತ್ತಲಿನ ಹಲವು ಹಳ್ಳಿಗಳು ಇದರೊಂದಿಗೆ ಸಂಪರ್ಕ ಹೊಂದಿವೆ. ಘಟನೆಯಲ್ಲಿ ಸಾವುನೋವು ಸಂಭವಿಸಿದ ಕುರಿತು ವರದಿಯಾಗಿಲ್ಲ. ಸಿವಾನ್ ಜಿಲ್ಲೆಯಲ್ಲೇ ಕಳೆದ 11 ದಿನಗಳಲ್ಲಿ ನಡೆದ 2ನೇ ಘಟನೆ ಇದಾಗಿದೆ.
‘ಸೇತುವೆ ಕುಸಿತಕ್ಕೆ ಕಾರಣವನ್ನು ಪತ್ತೆ ಮಾಡಲಾಗುತ್ತಿದೆ. ಜಿಲ್ಲೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ.