ತೆಪ್ಪ ದುರಂತ | ನಾಗರಿಕ ಸಮಾಜ ತಲೆ ತಗ್ಗಿಸುವ ಘಟನೆ: ಸಚಿವ ಶಿವಾನಂದ ಪಾಟೀಲ

Prasthutha|

ವಿಜಯಪುರ: ತಮ್ಮ ಬಾಗೇವಾಡಿ ಕ್ಷೇತ್ರ ವ್ಯಾಪ್ತಿಯ ಕೃಷ್ಣಾ ನದಿಯಲ್ಲಿ ನಡೆದ ತೆಪ್ಪ ದುರಂತ ನಾಗರಿಕ ಸಮಾಜ ತಲೆ ತಗ್ಗಿಸುವ ಘಟನೆಯಾಗಿದೆ. ಈ ಕುರಿತು ಸಮಗ್ರ ತನಿಖೆ ನಡೆಸುವುದಾಗಿ ಸಕ್ಕರೆ ಸಚಿವ ಶಿವಾನಂದ ಪಾಟೀಲ ಹೇಳಿದ್ದಾರೆ. ಮೃತರ ಕುಟುಂಬಗಳಿಗೆ ಸರ್ಕಾರದಿಂದ ಪರಿಹಾರ ಕೊಡಿಸುವ ಕುರಿತು ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದ್ದಾರೆ.

- Advertisement -

ಘಟನಾ ಸ್ಥಳಕ್ಕೆ ಭೇಟಿ ನೀಡಿ ನದಿಯಲ್ಲಿ ನಾಪತ್ತೆಯಾದವರ ಶೋಧ ಕಾರ್ಯಾಚರಣೆ ಪರಿಶೀಲಿದ ಸಚಿವರು, ಇದೊಂದು ಅಸಹ್ಯದ ಘಟನೆಯಾಗಿದೆ. ಈ ದುರ್ಘಟನೆ ನಡೆಯಬಾರದಿತ್ತು. ಈ ಬಗ್ಗೆ ವಿಷಾದಿಸುವುದಾಗಿ ಹೇಳಿದರು.

ಮೃತರ ಕುಟುಂಬ ಸದಸ್ಯರಿಗೆ ಸಚಿವ ಶಿವಾನಂದ ಪಾಟೀಲ ವಯಕ್ತಿಕವಾಗಿ ತಲಾ 3 ಲಕ್ಷ ರೂ. ವಿತರಿಸಿ ಸಾಂತ್ವನ ಹೇಳಿದ್ದಾರೆ. ಘಟನೆ ಕುರಿತು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೊಂದಿಗೆ ನಾನೇ ಮಾತನಾಡಿದ್ದೇನೆ. ಮೃತರ ಕುಟುಂಬದವರಿಗೆ ಸರ್ಕಾರದಿಂದ ಪರಿಹಾರ ಕೊಡಿಸುವ ಕುರಿತು ಪ್ರಯತ್ನ ಮಾಡುವುದಾಗಿ ಹೇಳಿದರು.

- Advertisement -

ಘಟನೆಯಲ್ಲಿ ಪಿಎಸ್‍ಐ ನೇತೃತ್ವದಲ್ಲೇ ಪೊಲೀಸರು ಜೂಜಾಡುವ ದುರ್ಬಲರ ಮೇಲೆ ದಾಳಿ ಮಾಡಿದ್ದು, ಇದೇ ದುರಂತಕ್ಕೆ ಪ್ರಮುಖ ಕಾರಣ ಎಂಬ ದೂರುಗಳಿವೆ. ಆದರೆ ಜಿಲ್ಲೆಯಲ್ಲಿ ಗಣ್ಯರು, ಉಳ್ಳವರು ಪೊಲೀಸರಿಗೆ ಹಣ ಕೊಟ್ಟು ಇಸ್ಪೀಟ್ ಜೂಜು ಆಡಿಸುತ್ತಿದ್ದಾರೆ ಎಂಬ ಆರೋಪವಿದೆ ಎಂದು ಹರಿಹಾಯ್ದರು.

ಆದರೆ ಪೊಲೀಸರು ಇಂಥವರ ವಿರುದ್ಧ ಕ್ರಮ ಕೈಗೊಳ್ಳುವ ಬದಲು, ದುರ್ಬಲರು ಜೂಜು ಆಡಿದಾಗ ದಾಳಿ ಮಾಡುತ್ತಾರೆ. ಈ ಪ್ರಕರಣದಲ್ಲಿ ಪಿಎಸ್‍ಐ ಹಣ ಪಡೆದು ಇಂಥ ಜೂನು ಆಡಲು ಅವಕಾಶ ಕೊಟ್ಟಿರುವ ಕುರಿತು ತನಿಖೆ ನಡೆಸಲಾಗುತ್ತದೆ ಎಂದರು.



Join Whatsapp