ಕಾಳ್ತುಳಿತ ದುರಂತದ ಹಿಂದೆ ಷಡ್ಯಂತ್ರ: ಭೋಲೆ ಬಾಬಾ

Prasthutha|

ಹತ್ರಾಸ್: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಸತ್ಸಂಗ ಕಾರ್ಯಕ್ರಮದ ಕಾಳ್ತುಳಿತ ಘಟನೆಗೆ ಸಂಬಂಧಿಸಿದಂತೆ ಭೋಲೆ ಬಾಬಾ ಪ್ರತಿಕ್ರಿಯಿಸಿದ್ದು, ಇದು ಷಡ್ಯಂತ್ರ ಎಂದು ಆರೋಪಿಸಿದ್ದಾರೆ.

- Advertisement -

ತಮ್ಮ ವಕೀಲರ ಮೂಲಕ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಭೋಲೆ ಬಾಬಾ ನಾವು ಮೃತರ ಕುಟುಂಬಳಿಗೆ ಸಂತಾಪ ಸೂಚಿಸುತ್ತೇವೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇವೆ. ಘಟನೆಯಲ್ಲಿ ಸಮಾಜ ವಿರೋಧಿಗಳ ಕೈವಾಡವಿದ್ದು, ಇದರ ಹಿಂದೆ ದೊಡ್ಡ ಷಡ್ಯಂತ್ರವಿದೆ. ಇದರ ಬಗ್ಗೆ ತನಿಖೆಯಾಗಬೇಕಿದ್ದು, ಸರ್ಕಾರ ಈ ಬಗ್ಗೆ ಆದೇಶಿಸಬೇಕು ಎಂದು ಆಗ್ರಹಿಸಿದ್ದಾರೆ.

ಭೋಲೆ ಬಾಬಾ ನಡೆಸಿಕೊಟ್ಟ ಸತ್ಸಂಗ ಕಾರ್ಯಕ್ರಮದಲ್ಲಿ ಉಂಟಾದ ಭೀಕರ ಕಾಲ್ತುಳಿತದಲ್ಲಿ 126ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದು, ಹಲವರ ಸ್ಥಿತಿ ಚಿಂತಾಜನಕವಾಗಿದೆ. ಘಟನೆಯ ನಂತರ ಸ್ವಘೋಷಿತ ದೇವಮಾನವ ಭೋಲೆ ಬಾಬಾ ತಲೆಮಾರಿಸಿಕೊಂಡಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಗಾಯಾಳುಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದಾರೆ. ಘಟನೆಗೆ ಕಾರಣರಾದವರನ್ನು ನಮ್ಮ ಸರ್ಕಾರ ಸುಮ್ಮನೇ ಬಿಡುವುದಿಲ್ಲ ಎಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ ಹೇಳಿದ್ದಾರೆ.



Join Whatsapp