ರಾಜ್ಯದ ಬಾಕಿ ರೈಲ್ವೆ ಯೋಜನೆಗಳನ್ನು ಪೂರ್ಣಗೊಳಿಸಲು ಕೇಂದ್ರಕ್ಕೆ ಡಿ.ಕೆ.ಸುರೇಶ್ ಮನವಿ

Prasthutha|

ಬೆಂಗಳೂರು: ರಾಜ್ಯದ ಬಾಕಿ ರೈಲ್ವೆ ಹಾಗೂ ಜಲ ಮಿಷನ್ ಯೋಜನೆಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಸರಕಾರಕ್ಕೆ ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಮನವಿ ಮಾಡಿದ್ದಾರೆ.

- Advertisement -

ಡಿ ಕೆ ಸುರೇಶ್ ಅವರು ದೆಹಲಿಯಲ್ಲಿ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ಅವರನ್ನು ಬುಧವಾರ ಭೇಟಿ ಮಾಡಿ ಈ ಮನವಿ ಸಲ್ಲಿಸಿದರು.
ಹೆಜ್ಜಾಲ, ಕನಕಪುರ ಹಾಗೂ ಚಾಮರಾಜನಗರ ಹೊಸ ರೈಲ್ವೆ ಮಾರ್ಗ ಈ ಹಿಂದೆಯೇ ಮಂಜೂರಾಗಿ, ಟೆಂಡರ್ ಪ್ರಕ್ರಿಯೆ ಆಗಿದ್ದರೂ ಕಾಮಗಾರಿ ಮಾತ್ರ ಆರಂಭವಾಗಿಲ್ಲ. ಅದೇ ರೀತಿ ರಾಜ್ಯದ ಅನೇಕ ರೈಲ್ವೆ ಯೋಜನೆಗಳು ಹತ್ತು ವರ್ಷಗಳಿಂದ ನೆನೆಗುದಿಗೆ ಬಿದ್ದಿವೆ. ಈ ಯೋಜನೆಗಳಿಗೆ ಅನುದಾನ ನೀಡಿ ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಿ ಎಂದು ಸುರೇಶ್ ಅವರು ಕೋರಿದರು



Join Whatsapp