ನವದೆಹಲಿ: ರೋಹಿತ್ ಶರ್ಮಾ ನೇತೃತ್ವದ ಭಾರತ ಕ್ರಿಕೆಟ್ ತಂಡವು ಇಂದು (ಜು.4) ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ.
ಬಾರ್ಬಡೋಸ್ ನಿಂದ ಗುರುವಾರ ಮುಂಜಾನೆ ದೆಹಲಿಗೆ ಬಂದಿಳಿದ ಟೀಮ್ ಇಂಡಿಯಾ ಆಟಗಾರರು ಮತ್ತು ಸಿಬ್ಬಂದಿಗಳು, 11 ಗಂಟೆಗೆ ನವದೆಹಲಿಯ ಲೋಕ್ ಕಲ್ಯಾಣ್ ಮಾರ್ಗ್ ನಲ್ಲಿರುವ ಪ್ರಧಾನಿ ನಿವಾಸಕ್ಕೆ ಆಗಮಿಸಿದರು. ಈ ವೇಳೆ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಹಾಗೂ ಕಾರ್ಯದರ್ಶಿ ಜಯ್ ಶಾ ಕೂಡ ಹಾಜರಿದ್ದರು.
ವಿಶ್ವಕಪ್ ಗೆದ್ದು ಆಗಮಿಸಿದ ಟೀಮ್ ಇಂಡಿಯಾವನ್ನು ಸ್ವಾಗತಿಸಿದ ಪ್ರಧಾನಿ ಮೋದಿ, ಕೆಲ ಹೊತ್ತು ಕುಶಲೋಪರಿ ನಡೆಸಿದರು. ಅಲ್ಲದೆ ಆ ಬಳಿಕ ಟೀಮ್ ಇಂಡಿಯಾ ಆಟಗಾರರು ಪ್ರಧಾನಿಯೊಂದಿಗೆ ಟಿ20 ವಿಶ್ವಕಪ್ ಹಿಡಿದು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಭೇಟಿ ಬಳಿಕ ಟೀಮ್ ಇಂಡಿಯಾ ಆಟಗಾರರು ಮುಂಬೈಗೆ ತೆರಳಿದ್ದಾರೆ. ಇಂದು ಸಂಜೆ ಭಾರತ ತಂಡ ವಿಜಯಯಾತ್ರೆ ನಡೆಯಲಿದ್ದು, ಇದಕ್ಕಾಗಿ ಟೀಮ್ ಇಂಡಿಯಾ ಆಟಗಾರರು ದೆಹಲಿಯಿಂದ ಮುಂಬೈನತ್ತ ಪ್ರಯಾಣ ಬೆಳೆಸಿದ್ದಾರೆ.