ಉಡುಪಿ: ನಾಳೆ ಕುಂದಾಪುರ, ಬೈಂದೂರು, ಬ್ರಹ್ಮಾವರದಲ್ಲಿ ಪಿಯು ಕಾಲೇಜುವರೆಗೆ ರಜೆ ಘೋಷಣೆ

Prasthutha|

ಉಡುಪಿ: ಕುಂದಾಪುರ, ಬೈಂದೂರು ಮತ್ತು ಬ್ರಹ್ಮಾವರ ವಲಯದ ಅಂಗನವಾಡಿ , ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ನಾಳೆ (ಜುಲೈ 5) ರಜೆ ಘೋಷಣೆ ಮಾಡಲಾಗಿದೆ.

- Advertisement -

ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಹಲವು ಅನಾಹುತಗಳು ವರದಿಯಾಗಿವೆ. ಮುಖ್ಯವಾಗಿ ಕುಂದಾಪುರ, ಬೈಂದೂರು ಮತ್ತು ಬ್ರಹ್ಮಾವರ ಭಾಗದಲ್ಲಿ ತಗ್ಗು ಪ್ರದೇಶಗಳು ನೆರೆ ನೀರಿನಿಂದ ಜಲಾವೃತವಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕುಂದಾಪುರ, ಬೈಂದೂರು ಮತ್ತು ಬ್ರಹ್ಮಾವರ ವಲಯದ ಅಂಗನವಾಡಿ , ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಣೆ ಮಾಡಿ ಕುಂದಾಪುರ ಉಪ ವಿಭಾಗಾಧಿಕಾರಿ ರಶ್ಮಿ ಅವರು ಆದೇಶ ಹೊರಡಿಸಿದ್ದಾರೆ.

ಸಾರ್ವಜನಿಕರು ಮಳೆ ಹೆಚ್ಚಾಗಿರುವ ಕಾರಣ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಡಳಿತ ಸಲಹೆ ನೀಡಿದೆ. ನೆರೆ ಸಂಬಂಧಿತ ಜನರ ನೆರವಿಗೆ ಬರಲು ವ್ಯವಸ್ಥೆಗಳನ್ನೂ ಮಾಡಿಕೊಂಡಿದೆ.



Join Whatsapp