ಬೆಳಗಾವಿ: ಖಾನಾಪುರ ತಾಲೂಕಿನ 7 ಜಲಪಾತಗಳಿಗೆ ನಿರ್ಬಂಧ

Prasthutha|

ಬೆಳಗಾವಿ: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಹಿನ್ನೆಲೆ ದಟ್ಟ ಕಾಡಂಚಿನಲ್ಲಿರುವ ಜಲಪಾತಗಳ ವೀಕ್ಷಣೆಗೆ ನಿರ್ಬಂಧ ಹೇರಲಾಗಿದೆ. ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ 7 ಜಲಪಾತಗಳಿಗೆ ನಿರ್ಬಂಧ ವಿಧಿಸಲಾಗಿದೆ. ಮಹಾರಾಷ್ಟ್ರದ ಲೊನಾವಾಲಾ ದುರಂತದ ಬಳಿಕ ಎಚ್ಚೆತ್ತ ಅರಣ್ಯ ಇಲಾಖೆ ಖಾನಾಪುರ ತಾಲೂಕಿನ ಕಾಡಂಚಿನಲ್ಲಿರುವ ಪ್ರಸಿದ್ಧ ಜಲಪಾತಗಳ ವೀಕ್ಷಣೆಗೆ ಬ್ರೇಕ್ ಹಾಕಿದೆ.

- Advertisement -

ಬಟವಾಡೆ ಫಾಲ್ಸ್, ಚಿಕ್ಕಲೆ ಫಾಲ್ಸ್, ಪಾರವಾಡ ಫಾಲ್ಸ್, ಚೋರ್ಲಾ ಫಾಲ್ಸ್, ವಜ್ರಾ ಫಾಲ್ಸ್​​ ಹೀಗೆ 7 ಜಲಪಾತಗಳ ವೀಕ್ಷಣೆಗೆ ನಿಷೇಧ ಹೇರಲಾಗಿದೆ. ಫಾಲ್ಸ್ ಬಳಿ ಅರಣ್ಯ ಇಲಾಖೆ ಸಿಬ್ಬಂದಿ ಗಸ್ತು ಕಾರ್ಯ ನಿರ್ವಹಿಸುತ್ತಿದ್ದಾರೆ. ಫಾಲ್ಸ್ ಮುಖ್ಯ ರಸ್ತೆಗೆ ಮೂವರು ಫಾರೆಸ್ಟ್ ಗಾರ್ಡ್​ಗಳು ಕಾವಲು ಕಾಯುತ್ತಿದ್ದಾರೆ. ವೀಕೆಂಡ್​ನಲ್ಲಿ ಫಾಲ್ಸ್ ನೋಡಲು ಕರ್ನಾಟಕ, ಗೋವಾ, ಮಹಾರಾಷ್ಟ್ರ ರಾಜ್ಯದಿಂದ ಬರುವ ಪ್ರವಾಸಿಗರಿಗೆ ನಿರಾಸೆಯಾಗಿದೆ.



Join Whatsapp