ಚನ್ನಪಟ್ಟಣ ಉಪ ಚುನಾವಣೆ; ನನ್ನ ಪತ್ನಿ ಅನಸೂಯ ಸ್ಪರ್ಧಿಸಲ್ಲ: ಸಂಸದ ಡಾ. ಸಿಎನ್ ಮಂಜುನಾಥ್

Prasthutha|

ಬೆಂಗಳೂರು: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಪುತ್ರಿ ಅನಸೂಯ ಸ್ಪರ್ಧಿಸುತ್ತಾರೆ ಎಂಬ ವದಂತಿ ಇದೆ. ಆದರೆ ತಮ್ಮ ಪತ್ನಿ ಅನಸೂಯ ಅವರು ನೂರಕ್ಕೆ ನೂರು ಉಪ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಬಿಜೆಪಿ ಸಂಸದ ಡಾ. ಸಿಎನ್ ಮಂಜುನಾಥ್ ಅವರು ಶನಿವಾರ ಹೇಳಿದ್ದಾರೆ.

- Advertisement -


ಚನ್ನಪಟ್ಟಣ ಉಪಚುನಾವಣೆಯಲ್ಲಿ ತಮ್ಮ ಪತ್ನಿ ಸ್ಪರ್ಧೆ ಬಗ್ಗೆ ಪ್ರತಿಕ್ರಿಯಿಸಿ ಮಂಜುನಾಥ್ ಅವರು, ನೂರಕ್ಕೆ ನೂರು ಪರ್ಸೆಂಟ್ ನನ್ನ ಪತ್ನಿ ನಿಲ್ಲಲ್ಲ. ಕೆಲವು ಪತ್ರಿಕೆ, ಮಾಧ್ಯಮದಲ್ಲಿ ಅನಸೂಯ ಸ್ಪರ್ಧಿಸುತ್ತಾರೆ ಎಂದು ಬಂದಿದೆ. ಇದು ನಮಗೆ ಬಹಳಷ್ಟು ಮುಜುಗರ ತರಿಸಿದೆ. ಅನುಸೂಯ ಯಾವುದೇ ಕಾರಣಕ್ಕೂ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದು ಸ್ಪಷ್ಟಪಡಿಸಿದರು.



Join Whatsapp