ಮಂಗಳೂರು: ನಗರದ ಸರ್ಕ್ಯೂಟ್ ಹೌಸ್ ಬಳಿಯಿಂದ ಬಿಜೈ ಸರ್ಕಲ್ ವರೆಗಿನ ರಸ್ತೆಗೆ “ಜಾರ್ಜ್ ಫೆರ್ನಾಂಡಿಸ್ ರಸ್ತೆ” ಎಂದು ಅಧಿಕೃತವಾಗಿ ನಾಮಕರಣಗೊಳಿಸಲಾಗಿದೆ. ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ಈ ನಾಮಕರಣ ನಡೆಯಿತು.
ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ್ ಕಾಮತ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಬಿಜೈ ಚರ್ಚ್ ನ ಧರ್ಮಗುರು ಜೆ ಬಿ ಸಾಲ್ದಾನ, ವಿಶೇಷ ಅತಿಥಿಗಳಾಗಿ ಜಾರ್ಜ್ ಫೆರ್ನಾಂಡಿಸ್ ರ ಸಹೋದರ ಮೈಕಲ್ ಫೆರ್ನಾಂಡಿಸ್, ಪಾಲಿಕೆ ಸದಸ್ಯರು, ಸೇರಿದಂತೆ ಅನೇಕ ಪ್ರಮುಖರು ಉಪಸ್ಥಿತರಿದ್ದರು.
ರೈಲ್ವೆ ಸಚಿವರಾಗಿ, ದೇಶದ ರಕ್ಷಣಾ ಸಚಿವರಾಗಿ ಜಾರ್ಜ್ ಫೆರ್ನಾಂಡಿಸ್ ಸೇವೆ ಸಲ್ಲಿಸಿದ್ದರು.