ಉತ್ತರಾಖಂಡದಲ್ಲಿ ಎರಡು ಅಂತಸ್ತಿನ ಕಟ್ಟಡ ಕುಸಿತ: ಹಲವರು ಸಿಲುಕಿರುವ ಸಾಧ್ಯತೆ

Prasthutha|

ದಿಯೊಗಢ: ಉತ್ತರಾಖಂಡದ ದಿಯೊಗಢ ಜಿಲ್ಲೆಯಲ್ಲಿ ಬೆಳಿಗ್ಗೆ ಎರಡು ಅಂತಸ್ತಿನ ಕಟ್ಟಡವೊಂದು ಕುಸಿದಿದ್ದು, ಅವಶೇಷಗಳಡಿ ಹಲವು ಮಂದಿ ಸಿಲುಕಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ಎನ್‌ಡಿಆರ್‌ಎಫ್‌ ಇನ್‌ಸ್ಪೆಕ್ಟರ್‌ ರಂಧೀರ್ ಕುಮಾರ್‌ ಮುಂದಾಳುತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಸ್ಥಳದಿಂದ ಓರ್ವ ವ್ಯಕ್ತಿಯನ್ನು ರಕ್ಷಿಸಲಾಗಿದ್ದು, ಅವಶೇಷಗಳಡಿ ಇನ್ನಿಬ್ಬರು ಸಿಲುಕಿರುವ ಶಂಕೆ ಇದೆ. ಅವರನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶನಿವಾರ ಗುಜರಾತ್‌ನ ಸೂರತ್‌ನಲ್ಲಿ ಬಹುಮಹಡಿ ಕಟ್ಟಡ ಕುಸಿದು ಬಿದ್ದಿದ್ದು, 7 ಮಂದಿ ಸಾವಿಗೀಡಾಗಿದ್ದಾರೆ.



Join Whatsapp