ದ.ಕ. ಜಿಲ್ಲಾದ್ಯಂತ ಗಿರಿತಾಣ, ಶಿಖರಗಳಿಗೆ ಚಾರಣ ಹಾಗೂ ‘ನೀರಿಗಿಳಿಯುವುದಕ್ಕೆ’ ನಿಷೇಧ

Prasthutha|

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ಜಿಲ್ಲೆಯಾದ್ಯಂತ ಪ್ರಾಕೃತಿಕ ವಿಕೋಪದ ಘಟನೆಗಳಾಗುತ್ತಿವೆ. ಜಿಲ್ಲಾಡಳಿತದಿಂದ ಸಾರ್ವಜನಿಕರ ಹಿತಾಸಕ್ತಿ ಗಮನಿಸಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಹಾಗೂ ಪ್ರವಾಸಿಗರ ಸುರಕ್ಷಾ ದೃಷ್ಟಿಯಿಂದ ಜಿಲ್ಲೆಯಲ್ಲಿ ಗಿರಿತಾಣ, ಶಿಖರಗಳಿಗೆ ಮಳೆಗಾಲದ ಅವಧಿಯಲ್ಲಿ ಚಾರಣ ಹೋಗುವುದನ್ನು ಸಂಪೂರ್ಣ ನಿರ್ಬಂಧಿಸಲಾಗಿದೆ.

- Advertisement -

ಮಳೆಗಾಲ ಮುಗಿಯುವವರೆಗೆ ಹೋಮ್ ಸ್ಟೇ, ರೆಸಾರ್ಟ್, ಅರಣ್ಯ ಇಲಾಖೆ ವತಿಯಿಂದ ಕೈಗೊಳ್ಳುವ ಟ್ರೆಕ್ಕಿಂಗ್ ಸಾಹಸ ಚಟುವಟಿಕೆಗಳು ಇತ್ಯಾದಿ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ. ಆದೇಶದ ಉಲ್ಲಂಘನೆ ಮಾಡಿದರೆ ಡಿಸಾಸ್ಟರ್ ಮ್ಯಾನೇಜೆಂಟ್ ಕಾಯ್ದೆ 2005 ಸೆಕ್ಷನ್ 51ಬಿ ಪ್ರಕಾರ ದಂಡ ವಿಧಿಸಲಾಗುವುದು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಹಾಗೂ ದಕ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ ಸೂಚಿಸಿದ್ದಾರೆ.

ಅಲ್ಲದೆ, ಮಳೆಗಾಲದ ಅವಧಿಯಲ್ಲಿ ಜಿಲ್ಲೆಯಾದ್ಯಂತ ಇರುವ ಜಲಪಾತ, ಝರಿ, ನದಿ, ಸಮುದ್ರ, ಜಲಾಶಯದ ಪ್ರದೇಶಗಳಲ್ಲಿ ಸಾರ್ವಜನಿಕರು, ಪ್ರವಾಸಿಗರು ನೀರಿನಲ್ಲಿ ಇಳಿಯುವುದು, ಈಜುವುದು, ಸಾಹಸ ಚಟುವಟಿಕೆಗಳನ್ನು ನಡೆಸುವುದನ್ನು ನಿರ್ಬಂಧಿಸಿ ಮುಂದಿನ ಆದೇಶದ ವರೆಗೆ ಜಿಲ್ಲಾಧಿಕಾರಿ ಅದೇಶಿಸಿದ್ದಾರೆ. ತಪ್ಪಿದಲ್ಲಿ ದಂಡನೆ ವಿಧಿಸಲಾಗುತ್ತದೆ ಎಂದು ತಿಳಿಸಿದ್ದಾರೆ.



Join Whatsapp