ಇಂಫಾಲ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡಿದ್ದು, ಸಂತ್ರಸ್ತರೊಂದಿಗೆ ಸಂವಾದ ನಡೆಸಿದ್ದಾರೆ.
ರಾಹುಲ್ ಗಾಂಧಿ ಇಂದು ಬೆಳಿಗ್ಗೆ ಅಸ್ಸಾಂನ ನಿರಾಶ್ರಿತರ ಶಿಬಿರಕ್ಕೆ ಭೇಟಿ ನೀಡಿದ್ದರು. ಅಲ್ಲಿನ ಸಂತ್ರಸ್ತರೊಂದಿಗೆ ಸಂವಾದ ನಡೆಸಿದ್ದರು. ಬಳಿಕ ರಸ್ತೆ ಮೂಲಕ ಮಣಿಪುರದ ಜಿರಿಬಾಮ್ಗೆ ತೆರಳಿದ್ದಾರೆ.
ರಾಹುಲ್ ಗಾಂಧಿ ಅವರು ಜಿರಿಬಾಮ್ ನಲ್ಲಿ ಸಂತ್ರಸ್ತರೊಂದಿಗೆ ಸಂವಾದ ನಡೆಸುವ ಮೂಲಕ ಕಷ್ಟದ ಸಂದರ್ಭದಲ್ಲಿ ನಿಮ್ಮೊಂದಿಗೆ ನಾವಿದ್ದೇವೆ ಎಂದು ಬೆಂಬಲ ಸೂಚಿಸಿದ್ದಾರೆ ಎಂದು ಕಾಂಗ್ರೆಸ್ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
ಈಚೆಗೆ ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಶಂಕಿತ ಬಂಡುಕೋರರು ಎರಡು ಪೊಲೀಸ್ ಉಪಠಾಣೆಗಳು, ಒಂದು ಅರಣ್ಯ ಇಲಾಖೆ ಕಚೇರಿ ಮತ್ತು 70 ಮನೆಗಳಿಗೆ ಬೆಂಕಿ ಹಚ್ಚಿರುವ ಪ್ರಕರಣ ನಡೆದಿತ್ತು.
LoP Shri @RahulGandhi visits Jiribam Higher Secondary School relief camp, meets victims of violence & offers support in their darkest hour.
— Congress (@INCIndia) July 8, 2024
His third visit to Manipur post-violence shows his unwavering commitment to the people's cause.
📍 Manipur pic.twitter.com/BpuKeCyoIM