ಬಿಜೆಪಿ ಸಂಸದ ಸುಧಾಕರ್ ಮದ್ಯ ಹಂಚಿಕೆ ಬಗ್ಗೆ ಕಿಡಿಗಾರಿದ ಡಿಕೆ ಶಿವಕುಮಾರ್

Prasthutha|

ಬೆಂಗಳೂರು: ಚಿಕ್ಕಬಳ್ಳಾಪುರ ಸಂಸದ ಡಾ ಕೆ ಸುಧಾಕರ್ ಕಾರ್ಯಕರ್ತರಿಗೆ ಮದ್ಯ ಹಂಚಿಕೆ ಮಾಡಿರುವ ಬಗ್ಗೆ ಆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಉತ್ತರಿಸಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

- Advertisement -

ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೆಲಮಂಗಲದಲ್ಲಿ ಬಿಜೆಪಿ ಕಾರ್ಯಕ್ರಮದಲ್ಲಿ ಮದ್ಯ ಹಂಚಿಕೆ ಮಾಡಿರುವ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸುವುದು ಬೇರೆ ವಿಚಾರ. ಆದರೆ ಬಿಜೆಪಿ ಪ್ರಮುಖ ನಾಯಕರು ಇದಕ್ಕೆ ಸ್ಪಷ್ಟನೆ ನೀಡಬೇಕು. ಬಿಜೆಪಿಯ ಇಂಥ ಸಂಸ್ಕೃತಿ ಬಗ್ಗೆ ಸ್ಥಳೀಯ ಬಿಜೆಪಿ ನಾಯಕರಿಗಿಂತ ರಾಷ್ಟ್ರೀಯ ನಾಯಕರು ಉತ್ತರಿಸಬೇಕು ಎಂದು ಹೇಳಿದ್ದಾರೆ.

ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದ ಬಿಜೆಪಿ ಅಭ್ಯರ್ಥಿ ಡಾ. ಕೆ ಸುಧಾಕರ್‌ ಮತದಾರರಿಗೆ ಹಾಗೂ ಪಕ್ಷದ ಕಾರ್ಯಕರ್ತರಿಗೆ ಮದ್ಯ ಹಂಚಿಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತಾದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮದ್ಯ ಹಂಚಿಕೆ ವಿಚಾರ ರಾಜಕೀಯವಾಗಿಯೂ ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ.



Join Whatsapp