ಹತ್ರಾಸ್: ಉತ್ತರ ಪ್ರದೇಶದ ಹತ್ರಾಸ್ ಸತ್ಸಂಗದ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತ ದುರಂತದಲ್ಲಿ 121 ಜನರ ಸಾವಿಗೆ ಕಾರಣವಾದ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ(ಎಸ್‌ಐಟಿ) ಸತ್ಸಂಗ ನೀಡುತ್ತಿದ್ದ ಭೋಲೆ ಬಾಬಾನಿಗೆ ಕ್ಲೀನ್ ಚಿಟ್ ನೀಡಿದೆ.
ದುರಂತದಲ್ಲಿ ಯಾವುದೇ ಪಿತೂರಿಯ ಬಗ್ಗೆ ಉಲ್ಲೇಖಿಸದ ಎಸ್‌ಐಟಿ ಘಟನೆಗೆ ಆಯೋಜಕರನ್ನು ಪ್ರಮುಖ ಹೊಣೆಗಾರರನ್ನಾಗಿ ಮಾಡಿದೆ. ಸರ್ಕಾರಕ್ಕೆ ಎಸ್‌ಐಟಿ ಸಲ್ಲಿಸಿರುವ ವರದಿಯಲ್ಲಿ ಭೋಲೆ ಬಾಬಾನ ಯಾವುದೇ ಪಾತ್ರವಿಲ್ಲ ಎಂದು ತಿಳಿಸಲಾಗಿದೆ.
ಸತ್ಸಂಗ ಕಾರ್ಯಕ್ರಮದಲ್ಲಿ ಸಾವಿರಾರು ಜನರಿಗೆ ಬೋಧನೆ ನೀಡುತ್ತಿದ್ದ ಭೋಲೆ ಬಾಬಾ ತನ್ನ ಪ್ರವಚನವನ್ನು ಮುಗಿಸಿದ ನಂತರ ತೆರಳಲು ಸಿದ್ದವಾಗಿದ್ದ. ಈ ಸಂದರ್ಭದಲ್ಲಿ ಬಾಬಾನ ಪಾದ ಸ್ಪರ್ಶಿಸಲು ಉಂಟಾದ ನೂಕುನುಗ್ಗಲಿನ ಕಾಲ್ತುಳಿತದಲ್ಲಿ ದುರಂತ ಸಂಭವಿಸಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.