ಬಳ್ಳಾರಿ: ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ನಾಗೇಂದ್ರ ಅವರ ಬಳ್ಳಾರಿ ನಿವಾಸದ ಮೇಲೆ ಬುಧವಾರ ಮುಂಜಾನೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಈ ವೇಳೆ, ವಿಜಯಕುಮಾರ್ ಮತ್ತು ಚೇತನ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ. ಈ ಇಬ್ಬರೂ ನಾಗೇಂದ್ರ ಅವರ ಆಪ್ತ ಸಹಾಯಕರಾಗಿದ್ದರು.
ಬುಧವಾರ ಮುಂಜಾನೆ, ಸಿಆರ್ ಪಿ ಎಫ್ ಭದ್ರತೆಯೊಂದಿಗೆ ಮೂರು ತಂಡಗಳಾಗಿ ಬಳ್ಳಾರಿಗೆ ಆಗಮಿಸಿದ ಇ.ಡಿ, ದಾಳಿ ನಡೆಸಿತು. ನಾಗೇಂದ್ರ ಅವರ ಬೆಂಗಳೂರಿನ ನಿವಾಸದಲ್ಲೂ ಶೋಧ ನಡೆಯುತ್ತಿದೆ.