ಮನೆ ಊಟ ಕೋರಿದ ದರ್ಶನ್ ಅರ್ಜಿ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

Prasthutha|

ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್, “ನನಗೆ ಮನೆ ಊಟ ಪಡೆಯಲು ಅನುಮತಿಸುವಂತೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಮೇಲ್ವಿಚಾರಕರಿಗೆ ನಿರ್ದೇಶಿಸಬೇಕು” ಎಂದು ಕೋರಿದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

- Advertisement -


ದರ್ಶನ್ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.


‘ನಿಮ್ಮ ಕೋರಿಕೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಬೇಕಿದೆ. ನಂತರವೇ ಆದೇಶ ಮಾಡಲಾಗುವುದು” ಎಂದು ತಿಳಿಸಿದರು. ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್ ಪಿ. ಪ್ರಸನ್ನ ಕುಮಾರ್ ಅವರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆಯನ್ನು ಇದೇ 18ಕ್ಕೆ ಮುಂದೂಡಿದರು.

- Advertisement -


ದರ್ಶನ್ ಸಲ್ಲಿಸಿರುವ ಮನವಿಯಲ್ಲಿ “ಜೈಲಿನಲ್ಲಿ ನೀಡಲಾಗುತ್ತಿರುವ ಆಹಾರ ಜೀರ್ಣಿಸಿಕೊಳ್ಳಲು ನನಗೆ ಆಗುತ್ತಿಲ್ಲ. ಜೈಲಿನ ಊಟದಿಂದಾಗಿ ಅತಿಸಾರ ಉಂಟಾಗಿದ್ದು ಪದೇ ಪದೇ ಭೇದಿ ಆಗುತ್ತಿದೆ. ಪರಿಣಾಮ ದೇಹದ ತೂಕ ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ಮನೆ ಆಹಾರ ತರಿಸಿಕೊಳ್ಳಲು ಜೈಲು ಅಧಿಕಾರಿಗಳಿಗೆ ಮೌಖಿಕವಾಗಿ ಮನವಿ ಮಾಡಿದ್ದೆ. ಆದರೆ, ಅವರು ಇದಕ್ಕೆ ಒಪ್ಪಿಲ್ಲ” ಎಂದು ದರ್ಶನ್ ಅರ್ಜಿಯಲ್ಲಿ ವಿವರಿಸಿದ್ದಾರೆ.



Join Whatsapp