ಕಲ್ಲಡ್ಕ ಭಟ್ ವಿರುದ್ಧ ಶ್ರೀರಂಗಪಟ್ಟಣ ಜೆಎಂಎಫ್‌ಸಿ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್ ತಡೆ

Prasthutha|

ಬೆಂಗಳೂರು: ಮುಸ್ಲಿಂ ಮಹಿಳೆಯರ ವಿರುದ್ಧ ನೀಡಿದ್ದ ಅವಹೇಳನಕಾರಿ ಹೇಳಿಕೆ ಸಂಬಂಧ RSS ಮುಖಂಡ ಡಾ. ಪ್ರಭಾಕರ ಭಟ್ ಕಲ್ಲಡ್ಕ ವಿರುದ್ಧ ಶ್ರೀರಂಗಪಟ್ಟಣ ಜೆಎಂಎಫ್ ಸಿ ಕೋರ್ಟ್‌ನಲ್ಲಿರುವ ಪ್ರಕರಣದ ನ್ಯಾಯಿಕ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

- Advertisement -

ಪ್ರಭಾಕರ್ ಭಟ್ ತನ್ನ ವಿರುದ್ಧ ದಾಖಲಾದ ಪ್ರಕರಣವನ್ನು ರದ್ದುಕೋರಿ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.

ಪ್ರಭಾಕರ ಭಟ್ ಪರ ಹೈಕೋರ್ಟ್ ಹಿರಿಯ ವಕೀಲ ಎಂ‌.ಅರುಣ್ ಶ್ಯಾಮ್ ವಾದ ಮಂಡಿಸಿದರು.

- Advertisement -

ಪ್ರಕರಣದ ಹಿನ್ನೆಲೆ: 2023ರ ಡಿಸೆಂಬರ್ 24ರಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣ ವೇದಿಕೆ ಹಮ್ಮಿಕೊಂಡಿದ್ದ ಹನುಮಮಾಲೆ ಸಂಕೀರ್ತನಾ ಯಾತ್ರೆ ಸಮಾರಂಭದಲ್ಲಿ ಮುಸ್ಲಿಂ ಮಹಿಳೆಯರಿಗೆ ಪರ್ಮನೆಂಟ್ ಗಂಡ ಇರಲಿಲ್ಲ. ಅವರಿಗೆ ದಿನಕ್ಕೊಂದು ಗಂಡ. ಅವರಿಗೆ ಪರ್ಮನೆಂಟ್ ಗಂಡನನ್ನು ಕೊಟ್ಟಿದ್ದು ಮೋದಿ ಸರ್ಕಾರ ಎಂದು ಸಾರ್ವಜನಿಕ ವೇದಿಕೆಯಲ್ಲಿ ಹೇಳಿದ್ದರು.

ಮಹಿಳೆಯರ ಬಗ್ಗೆ ಅಸಹ್ಯವಾಗಿ ಮಾತನಾಡಿ ಮಹಿಳೆಯರ ಘನತೆಗೆ ಅಡ್ಡಿ ಉಂಟು ಮಾಡಿದ ಅಪರಾಧ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಜೀರ್ ಬಿನ್ ನಜೀರ್ ಅಹ್ಮದ್ (27) ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ 2023ರ ಡಿಸೆಂಬರ್ 26ರಂದು ದೂರು ನೀಡಿದ್ದರು.

ದೂರಿನ ಅನ್ವಯ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಿದ್ದ ಪೊಲೀಸರು ಶ್ರೀರಂಗಪಟ್ಟಣ ಜೆಎಂಎಫ್ ಸಿ ವಿಚಾರಣಾ ಕೋರ್ಟ್‌ಗೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.



Join Whatsapp