47.10 ಕೋಟಿ ರೂ. ಹಗರಣ: ಬಿಜೆಪಿ ಮುಖಂಡ ವೀರಯ್ಯ ಬಂಧನ

Prasthutha|

ಬೆಂಗಳೂರು: ಡಿ.ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ನಿಯಮಿತದಲ್ಲಿ (ಡಿಡಿಯುಟಿಟಿಎಲ್‌) ನಡೆದ 47.10 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಡಿ.ಎಸ್‌.ವೀರಯ್ಯ ಅವರನ್ನು ಸಿಐಡಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

- Advertisement -

ಅಕ್ರಮದಲ್ಲಿ ವೀರಯ್ಯ ಅವರೂ ಶಾಮೀಲಾಗಿರುವುದಕ್ಕೆ ಕೆಲವು ಸಾಕ್ಷ್ಯಗಳು ಲಭಿಸಿದ್ದರಿಂದ ಅವರನ್ನು ಬಂಧಿಸಲಾಗಿದೆ ಎನ್ನಲಾಗಿದೆ.

ವಿಪರ‌್ಯಾಸ ಎಂದರೆ, ಮುಡಾ ನಿವೇಶನ ಅಕ್ರಮ ವಿರೋಧಿಸಿ ಶುಕ್ರವಾರ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ವೀರಯ್ಯ ಸಹ ಭಾಗವಹಿಸಲು ಹೊರಟಿದ್ದರು. ಆಗಲೇ ವೀರಯ್ಯ ಅವರನ್ನು ಬಂಧಿಸಿದ್ದು. ವೀರಯ್ಯರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುವುದು. ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ನ್ಯಾಯಾಧೀಶರನ್ನು ಕೋರಲಾಗುವುದು ಎಂದು ಪೊಲೀಸರು ಹೇಳಿದ್ದಾರೆ

- Advertisement -

ವೀರಯ್ಯ ವಿಧಾನಪರಿಷತ್ತಿನಲ್ಲಿ ಬಿಜೆಪಿ ಸದಸ್ಯರಾಗಿದ್ದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಡಿಡಿಯುಟಿಟಿಎಲ್‌ನ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.



Join Whatsapp