ಸಕಲೇಶಪುರ: ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೆ ಮಣ್ಣು ಕುಸಿತ

Prasthutha|

ಹಾಸನ: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಭಾನುವಾರದಿಂದ ಸುರಿಯುತ್ತಿರುವ ವರ್ಷಧಾರೆಯಿಂದಾಗಿ ನಿರ್ಮಾಣ ಹಂತದ ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೆ ಮಣ್ಣು ಕುಸಿತ ಸಂಭವಿಸಿದೆ.

- Advertisement -

ಹಾಸನದಿಂದ ಸಕಲೇಶಪುರ ತಾಲ್ಲೂಕಿನ ಮಾರನಹಳ್ಳಿವರೆಗೆ ನಡೆಯುತ್ತಿರುವ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಯ ಹಲವುಕಡೆ ದೊಡ್ಡ ಪ್ರಮಾಣದಲ್ಲಿ ಮಣ್ಣು ಕುಸಿಯುತ್ತಿದ್ದು ಆತಂಕ ಎದುರಾಗಿದೆ.

ಸಕಲೇಶಪುರ ಪಟ್ಟಣದ ಮಳಲಿ ಬಳಿಯ ನಿರ್ಮಾಣ ಹಂತದ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಮಣ್ಣು ಕುಸಿದು ಬೀಳುತ್ತಿದೆ. ತಡೆ ಗೋಡೆ ನಿರ್ಮಿಸದೆ ಕಾಂಕ್ರಿಟ್ ರಸ್ತೆ ನಿರ್ಮಾಣ ಮಾಡಿರುವ ಕಾರಣ ಸಕಲೇಶಪುರದಿಂದ ಆಲೆಬೇಲೂರಿಗೆ ತೆರಳೋ ಮಾರ್ಗದ ಮೇಲ್ಸೇತುವೆಯೇ ಕುಸಿದು ಬೀಳುವ ಭೀತಿ ಎದುರಾಗಿದೆ. ನಿರಂತರ ಮಳೆಯಿಂದ ಸೇತುವೆಯ ಸುತ್ತಲೂ ಇದೇ ರೀತಿ ಮಣ್ಣು ಕುಸಿಯುತ್ತಾ ಸಾಗಿದರೆ ಸಂಚಾರವೇ ಬಂದ್ ಆಗುವ ಸಾಧ್ಯತೆ ಇದೆ ಎಂದು ಸಾರ್ವಜನಿಕರು ದೂರಿದ್ದಾರೆ.



Join Whatsapp