ರೈತರಿಗೆ ಪಿಸ್ತೂಲ್ ತೋರಿಸಿ ಬೆದರಿಕೆ ಆರೋಪ: ಐಎಸ್ಎಸ್ ಅಧಿಕಾರಿ ಪೂಜಾ ಖೇಡ್ಕರ್ ತಾಯಿಯ ಬಂಧನ

Prasthutha|

ಪುಣೆ: ರೈತರಿಗೆ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕುತ್ತಿದ್ದ ಟ್ರೈನಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರ ತಾಯಿಯನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.

- Advertisement -


ಪೂಜಾ ಖೇಡ್ಕರ್ ಅವರ ತಾಯಿ ಮನೋರಮಾ ಖೇಡ್ಕರ್ ಅವರು ಪುಣೆಯಲ್ಲಿ ರೈತರಿಗೆ ಬೆದರಿಕೆ ಹಾಕಿದ್ದ ವಿಡಿಯೋ ವೈರಲ್ ಆಗಿತ್ತು. ಭಾರತೀಯ ನ್ಯಾಯ ಸಂಹಿತಾ ಮತ್ತು ಭಾರತೀಯ ಶಸ್ತ್ರಾಸ್ತ್ರ ಕಾಯ್ದೆಯ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ರೈತರೊಬ್ಬರ ದೂರಿನ ಆಧಾರದ ಮೇಲೆ ಆಕೆಯ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಮನೋರಮಾ ಖೇಡ್ಕರ್ ಅವರನ್ನು ರಾಯಗಢದ ಹೋಟೆಲ್ ನಲ್ಲಿ ಬಂಧಿಸಲಾಗಿದೆ.


ಮಹಾರಾಷ್ಟ್ರದಾದ್ಯಂತ ಆಸ್ತಿ ಹೊಂದಿರುವ ಖೇಡ್ಕರ್ ಕುಟುಂಬ ಪುಣೆಯ ಮುಲ್ಶಿ ತಹಸಿಲ್ ನಲ್ಲಿ 25 ಎಕರೆ ಭೂಮಿಯನ್ನು ಖರೀದಿಸಿತ್ತು. ಅಕ್ಕಪಕ್ಕದ ರೈತರ ಜಮೀನನ್ನು ಕೂಡ ಒತ್ತುವರಿ ಮಾಡಿಕೊಳ್ಳಲಾಗಿತ್ತು. ಇದಕ್ಕೆ ರೈತರು ಆಕ್ಷೇಪ ವ್ಯಕ್ತಪಡಿಸಿದಾಗ ಖೇಡ್ಕರ್ ಅವರ ತಾಯಿ ಮನೋರಮಾ ಬೌನ್ಸರ್ ಸಮೇತ ಸ್ಥಳಕ್ಕೆ ಆಗಮಿಸಿ ಪಿಸ್ತೂಲ್ ತೋರಿಸಿ ರೈತರಿಗೆ ಬೆದರಿಕೆ ಹಾಕಿದ್ದಾರೆ. ವಿಡಿಯೋದಲ್ಲಿ ಮನೋರಮಾ ಜಮೀನು ತನ್ನ ಹೆಸರಿನಲ್ಲಿದೆ ಎಂದು ಹೇಳಿದ್ದಾರೆ.



Join Whatsapp