ಮನೆ ಊಟ, ಹಾಸಿಗೆಗೆ ದರ್ಶನ್ ಬೇಡಿಕೆ: ವಿಚಾರಣೆ ಮುಂದೂಡಿಕೆ

Prasthutha|

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್, ತಮಗೆ ಮನೆಯಿಂದ ಊಟ ಬೇಕು, ಮಲಗಲು ಹಾಸಿಗೆ, ಓದಲು ಕೆಲವು ಪುಸ್ತಕಗಳನ್ನು ಮನೆಯಿಂದ ತರಿಸಿಕೊಳ್ಳಲು ಅವಕಾಶ ಕೊಡಬೇಕೆಂದು ಹೈಕೋರ್ಟ್ಗೆ ಜುಲೈ 19 ರಂದು ರಿಟ್ ಅರ್ಜಿ ಸಲ್ಲಿಸಿದ್ದರು.

- Advertisement -


ವಿಚಾರಣೆ ನಡೆಸಿದ್ದ ನ್ಯಾಯಾಲಯವು ಜೈಲು ಅಧಿಕಾರಿಗಳು, ಸರ್ಕಾರಕ್ಕೆ ನೊಟೀಸ್ ನೀಡಿ, ವಿಚಾರಣೆಯನ್ನು ಇಂದಿಗೆ ಮುಂದೂಡಿತ್ತು. ಆದರೆ ಈಗ ರಿಟ್ ಅರ್ಜಿಯ ವಿಚಾರಣೆಯನ್ನು ಜುಲೈ 19 ಅಂದರೆ ನಾಳೆಗೆ ಮುಂದೂಡಲಾಗಿದೆ. ಈ ಸಂಬಂಧ ದರ್ಶನ್ (47) ಸಲ್ಲಿಸಿರುವ ರಿಟ್ ಅರ್ಜಿಯು ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠದಲ್ಲಿ ಗುರುವಾರ ವಿಚಾರಣೆಗೆ ನಿಗದಿಯಾಗಿತ್ತು.


ಪ್ರಕರಣದ ಸಂಖ್ಯೆ ಕೂಗಿದಾಗ ವಿಶೇಷ ಪ್ರಾಸಿಕ್ಯೂಟರ್ ಪಿ.ಪ್ರಸನ್ನ ಕುಮಾರ್ ಮತ್ತು ಹೆಚ್ಚುವರಿ ಅಡ್ವೊಕೇಟ್ ಜನರಲ್ ವಿ.ಜಿ. ಭಾನುಪ್ರಕಾಶ್ ಅವರು ದರ್ಶನ್ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಪೀಠಕ್ಕೆ ಲಿಖಿತ ಆಕ್ಷೇಪಣೆ ಸಲ್ಲಿಸಿದರು.

- Advertisement -


ಆಕ್ಷೇಪಣೆ ಸ್ವೀಕರಿಸಿದ ನ್ಯಾಯಪೀಠ ಶುಕ್ರವಾರ (ಜುಲೈ 19) ಅರ್ಜಿ ವಿಚಾರಣೆ ನಡೆಸುವುದಾಗಿ ತಿಳಿಸಿತು. ದರ್ಶನ್ ಪರ ಹಿರಿಯ ವಕೀಲ ಕೆ.ಎನ್.ಫಣೀಂದ್ರ ಹಾಜರಿದ್ದರು.



Join Whatsapp