ಕಲಬುರಗಿ | ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ RSS ಸಭೆ..!

Prasthutha|

►ಸಭೆಯ ಚಿತ್ರೀಕರಣ ಮಾಡಿದ ಸಂಶೋಧನಾ ವಿದ್ಯಾರ್ಥಿಗೆ ಬೆದರಿಕೆ

- Advertisement -


ಕಲಬುರಗಿ: ಆಳಂದ ತಾಲ್ಲೂಕಿನ ಕಡಗಂಚಿ ಕೇಂದ್ರೀಯ ವಿಶ್ವ ವಿದ್ಯಾಲಯಲ್ಲಿ ಆರೆಸ್ಸೆಸ್ ಗೆ ಸಂಬಂಧಿಸಿದ ಸಭೆ ಬಹಿರಂಗವಾಗಿ ನಡೆದಿದ್ದು, ಈ ಬಗ್ಗೆ ಪ್ರಶ್ನೆ ಮಾಡಿದ ವಿದ್ಯಾರ್ಥಿಗಳಿಗೆ ಬೆದರಿಕೆ ನೀಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.


ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಅತಿಥಿ ಗೃಹದಲ್ಲಿ ಕುಲಪತಿ, ಕುಲಸಚಿವರು, ಹಿರಿಯ ಪ್ರಾಧ್ಯಾಪಕರ ಉಪಸ್ಥಿತಿಯಲ್ಲೇ ಜುಲೈ 18ರಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ ಎಸ್ ಎಸ್) ಸಭೆ ನಡೆದಿದೆ. ಈ ಸಭೆಯ ಕೊನೆಯಲ್ಲಿ ಆರ್ ಎಸ್ ಎಸ್ ನ ಧ್ಯೇಯಗೀತೆಯಾದ ‘ನಮಸ್ತೆ ಸದಾ ವತ್ಸಲೆ’ಯನ್ನು ಹಾಡಿದ್ದಲ್ಲದೇ, ಎಲ್ಲರೂ ಎದ್ದು ನಿಂತು ಆರ್ ಎಸ್ ಎಸ್ ಕಾರ್ಯಕರ್ತರಂತೆ ಕೈ ಎದೆಗೆ ಅಡ್ಡ ಹಿಡಿದು ನಿಂತಿರುವ ಹಾಗೂ ಭಗವಾಧ್ವಜಕ್ಕೆ ನಮಸ್ಕರಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಲ್ಲಿ ವೈರಲ್ ಆಗಿದೆ.

- Advertisement -


ಆರ್ ಎಸ್ ಎಸ್ ಧ್ಯೇಯಗೀತೆಯನ್ನು ಸಾಮೂಹಿಕವಾಗಿ ಹಾಡುತ್ತಿರುವುದನ್ನು ಗಮನಿಸಿದ ಕೆಲವು ಸಂಶೋಧನಾ ವಿದ್ಯಾರ್ಥಿಗಳು ತಮ್ಮ ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾರೆ. ಕಾರ್ಯಕ್ರಮದ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಸಂಶೋಧನಾ ವಿದ್ಯಾರ್ಥಿಗಳ ಮೇಲೆ ನರೇಂದ್ರ ದರಿಯಾ ಹಾಗೂ ರೋಹಿತ್ ಜೋಶಿ (ಬಸವರಾಜ್ ಡೋಣೂರ್ ಅವರ ಶಿಷ್ಯ) ಕೂಡಿಕೊಂಡು ಹಲ್ಲೆಗೆ ಮುಂದಾಗಿದ್ದಲ್ಲದೆ, ಮೊಬೈಲ್ ಕಸಿದುಕೊಂಡು “ವಿಡಿಯೋ ಡಿಲೀಟ್ ಮಾಡು ಇಲ್ಲವಾದರೆ ಪರಿಣಾಮ ಸರಿ ಇರುವುದಿಲ್ಲ”ವೆಂದು ಬೆದರಿಕೆ ಒಡ್ಡಿದ್ದಾರೆ ಎಂದು ಸಂಶೋಧನಾ ವಿದ್ಯಾರ್ಥಿ ನಂದಕುಮಾರ್ ಆರೋಪಿಸಿದ್ದಾರೆ.

ವಿಶ್ವವಿದ್ಯಾಲಯದ ಎಲ್ಲ ಆಯಾಯಾ ಕಟ್ಟಿನ ಸ್ಥಳಗಳನ್ನು ಅಕ್ರಮಿಸಿಕೊಂಡು ಅಧಿಕಾರದಲ್ಲಿರುವ ಆರ್ ಎಸ್ ಎಸ್ ನ ಮತಾಂಧರೆ ತುಂಬಿರುವ ಈ ವಿಶ್ವವಿದ್ಯಾಲಯದಲ್ಲಿ. ಶರಣರ, ಸೂಫಿ ಸಂತರ, ತತ್ವಪದಕಾರರ ಸೌಹಾರ್ದ ಪರಂಪರೆಯ ನಮ್ಮ ಈ ಭಾಗದ ವಿದ್ಯಾರ್ಥಿಗಳು ಇಂತಹ ಪ್ರಾಧ್ಯಾಪಕರಿಂದ ಏನನ್ನೂ ಕಲಿಯುವರು ಎಂಬುದನ್ನು ಊಹಿಸಿದರೆ ಆತಂಕವಾಗುತ್ತದೆ. ಹಾಗಾಗಿ ಈ ವಿಶ್ವವಿದ್ಯಾಲಯಕ್ಕೆ ಆರ್ ಎಸ್ ಎಸ್ ಕೇಂದ್ರೀಯ ಕಚೇರಿ ವಿಶ್ವವಿದ್ಯಾಲಯ ಅಂತ ಹೆಸರು ಇಡುವವುದೇ ಸೂಕ್ತ ಎನ್ನಿಸುತ್ತಿದೆ ಎಂದು ನಂದಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ.



Join Whatsapp