ಸ್ಪೀಕರ್ ಪೀಠದ ಬಳಿ ‘ಕೈ‘ ನಾಯಕರ ಫೋಟೋಶೂಟ್: ಯುಟಿ ಖಾದರ್ ಹೇಳಿದ್ದೇನು?

Prasthutha|

ಬೆಂಗಳೂರು: ವಿಧಾನಸಭೆ ಸಭಾಧ್ಯಕ್ಷರ ಪೀಠದ ಬಳಿ ಕಾಂಗ್ರೆಸ್ ನ ಕೆಲವು ನಾಯಕರು ಫೋಟೋ ಶೂಟ್ ನಡೆಸಿದ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಬಿಜೆಪಿ ಕಿಡಿಕಾರಿದೆ.

- Advertisement -


ಸ್ಪೀಕರ್ ಹುದ್ದೆ ಅತ್ಯಂತ ಪವಿತ್ರ ಹಾಗೂ ಘನತೆ ಇರುವಂತಹದ್ದು. ಸ್ಪೀಕರ್ ಹುದ್ದೆ ಅಲಂಕರಿಸಿದವರು ರಾಜಕೀಯದಿಂದ ಗಾವುದ ದೂರದಲ್ಲಿರಬೇಕು ಎಂಬುದು ಅಲಿಖಿತ ನಿಯಮ. ಆದರೆ ಸ್ಪೀಕರ್ ಹುದ್ದೆ ಅಲಂಕರಿಸಿರುವ ಯು.ಟಿ. ಖಾದರ್ ಅವರು ಸದನದ ನಿಯಮಾವಳಿಗಳೆಲ್ಲವನ್ನೂ ಗಾಳಿಗೆ ತೂರಿ ತಮ್ಮ ಪೀಠದ ಬಳಿ ತಮ್ಮ ರಾಜಕೀಯ ಆಪ್ತೇಷ್ಟರ ಜೊತೆ ಫೋಟೋಶೂಟ್ ಮಾಡಿಸಿಕೊಂಡಿರುವುದು ಎಷ್ಟರ ಮಟ್ಟಿಗೆ ಸರಿ ಎಂಬುದನ್ನು ಅವರೇ ತಿಳಿಸಬೇಕು’ ಎಂದು ಬಿಜೆಪಿ ಪ್ರಶ್ನಿಸಿದೆ.


ಇನ್ನು ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಭಾಧ್ಯಕ್ಷ ಯುಟಿ.ಖಾದರ್, ಇದು ಅಧಿವೇಶನ ಆರಂಭವಾಗುವ ಮುನ್ನ ಸದನದ ಒಳಗಡೆ ತೆಗೆದ ಫೊಟೋ ಆಗಿದೆ. ಸದನ ನಡೆಯುವಾಗ ತೆಗೆದ ಫೋಟೋ ಅಲ್ಲ. ಅಧಿವೇಶನ ಆರಂಭವಾಗುವ ಮುನ್ನ ಸದನದಲ್ಲಿ ಕೆಲಸ ನಡೆಯುತ್ತಿರುವಾಗ ರಾತ್ರಿ 10 ಗಂಟೆಗೆ ತಪಾಸಣೆಗೆ ಹೋಗಿದ್ದೆ. ಆಗ ಅಲ್ಲಿಗೆ ಆಗಮಿಸಿದ್ದವರು ನನ್ನೊಂದಿಗೆ ಫೋಟೋ ತೆಗೆದರು ಎಂದು ಹೇಳಿದ್ದಾರೆ.



Join Whatsapp