ಬೆಂಗಳೂರು ದಕ್ಷಿಣ ಜಿಲ್ಲೆ ಹೆಸರು ಬದಲಾವಣೆ ಮಾಡಲು ಕುಮಾರಸ್ವಾಮಿ ಹಣೆಯಲ್ಲೂ ಬರೆದಿಲ್ಲ: ಡಿಕೆಶಿ ತಿರುಗೇಟು

Prasthutha|

►’ಬರೆದಿಟ್ಟುಕೊಳ್ಳಿ 2028ಕ್ಕೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ

- Advertisement -


ಬೆಂಗಳೂರು : ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಬದಲಾವಣೆ ಮಾಡಿರುವ ಹೆಸರನ್ನು ಮತ್ತೆ ರಾಮನಗರ ಜಿಲ್ಲೆ ಎಂದು ಹೆಸರು ಬದಲಾವಣೆ ಮಾಡಲು ಕುಮಾರಸ್ವಾಮಿ ಹಣೆಯಲ್ಲೂ ಬರೆದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಕೇಂದ್ರ ಸಚಿವ ಕುಮಾರಸ್ವಾಮಿಗೆ ಸವಾಲು ಹಾಕಿದ್ದಾರೆ.

ರಾಮನಗರ ಜಿಲ್ಲೆ ಹೆಸರು ಬದಲಾಯಿಸಿದರೆ ರಾಜಕೀಯವಾಗಿ ನಾಶವಾಗಲಿದ್ದಾರೆ ಎಂಬ ಹೇಳಿಕೆಗೆ ವಿಧಾನಸೌಧ ಬಳಿ ಸುದ್ದಿಗಾರರಿಗೆ ಶನಿವಾರ ಪ್ರತಿಕ್ರಿಯಿಸಿದ ಅವರು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ರಾಜಕೀಯ ಕಾರಣಕ್ಕೆ ಹಾಸನದಿಂದ ಬೆಂಗಳೂರಿಗೆ ವಲಸೆ ಬಂದವರು. ರಾಜಕೀಯ ರಂಗದಲ್ಲಿ ಬೆಳೆದು ಮುಖ್ಯಮಂತ್ರಿ, ಪ್ರಧಾನಮಂತ್ರಿ ಹುದ್ದೆಗಳನ್ನು ಅಲಂಕರಿಸಿದ್ದಾರೆ ಎಂದರು.

- Advertisement -


ವಿಶ್ವವೇ ತಿರುಗಿ ನೋಡುವಮಟ್ಟಕ್ಕೆ ಬೆಂಗಳೂರು ಬೆಳೆದಿದೆ. ನಮ್ಮದು ಎಲ್ಲರ ಏಳಿಗೆ, ಜನಪರ ಆಡಳಿತ, ದೂರಗಾಮಿ ಅಭಿವೃದ್ಧಿ ನಿಲುವಾಗಿದೆ. ನಾಡಪ್ರಭು ಕೆಂಪೇಗೌಡ ಕಟ್ಟಿದ ಬೆಂಗಳೂರು ಗುರುತು ಬಿಟ್ಟುಕೊಡುವುದಿಲ್ಲ ಎಂದು ಪ್ರತಿಪಾದಿಸಿದರು.


ರಾಮನಗರ, ಕನಕಪುರ, ಚನ್ನಪಟ್ಟಣ, ಮಾಗಡಿ ಎಲ್ಲವೂ ಬೆಂಗಳೂರಿನ ಭಾಗವಾಗಿವೆ. ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡಿದ್ದೇವೆ. ರಾಮನಗರ ಜಿಲ್ಲಾ ಕೇಂದ್ರವಾಗಿಯೇ ಮುಂದುವರಿಯಲಿದೆ. ವಿಶ್ವದರ್ಜೆ ಬೆಂಗಳೂರು ಅಭಿವೃದ್ಧಿಗೆ ಹೊಸ ಆಯಾಮ ನೀಡಲು ಸರ್ಕಾರ ಕೈಗೊಂಡ ನಿರ್ಧಾರವನ್ನು ಜನರು ಸಂತೋಷದಿಂದ ಸ್ವಾಗತಿಸಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.


ವಿಧಾನಸಭೆ 2028ರ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬರುತ್ತೇವೆ. ಬೆಂಗಳೂರು ದಕ್ಷಿಣ ಜಿಲ್ಲೆ ಎಂಬ ಹೆಸರು ಕೈಬಿಟ್ಟು ರಾಮನಗರವೆಂದು ಮರು ನಾಮಕರಣ ಮಾಡುತ್ತೇವೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ಡಿಕೆಶಿ ಪ್ರತಿಕ್ರಿಯಿಸಿ, ಅವರ ಹಣೆಬರಹದಲ್ಲಿ ಮತ್ತೆ ಅಧಿಕಾರಕ್ಕೆ ಬರುವುದನ್ನು ಬರೆದಿಲ್ಲ. ಇವತ್ತೇ ಹೇಳುತ್ತೇನೆ, ನೀವು ( ಮಾಧ್ಯಮದವರು) ಬರೆದಿಟ್ಟುಕೊಳ್ಳಿರಿ. 2028ರ ಚುನಾವಣೆಯಕ್ಕೆ ಮತ್ತೆ ಪೂರ್ಣಬಹುಮತದೊಂದಿಗೆ ಗೆದ್ದು ಆಡಳಿತದ ಚುಕ್ಕಾಣಿ ಹಿಡಿಯಲಿದೆ ಎಂದು ಭವಿಷ್ಯ ನುಡಿದರು.



Join Whatsapp