ಮಾಂಸ ಸರಬರಾಜು ಪ್ರಕರಣ | ಮೇಲ್ನೋಟಕ್ಕೆ ನಾಯಿ ಮಾಂಸ ಎಂದು ಕಂಡುಬಂದಿಲ್ಲ: ಆಹಾರ ಇಲಾಖೆ

Prasthutha|

ಬೆಂಗಳೂರು: ರೈಲ್ವೆ ನಿಲ್ದಾಣದಲ್ಲಿ ವ್ಯಾಪಾರಿಯೊಬ್ಬರು ತೆಗೆದುಕೊಂಡು ಹೋಗುತ್ತಿದ್ದ ಕುರಿ ಮಾಂಸದ ಬಾಕ್ಸ್ ಗಳನ್ನು ತೆಗೆಸಿ ಈ ಮಾಂಸದಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎಂದು ಪುನೀತ್ ಕೆರೆಹಳ್ಳಿ ಸಾಕ್ಷ್ಯಾಧಾರ ರಹಿತ ಆರೋಪ ಮಾಡಿರುವ ಘಟನೆ ಶುಕ್ರವಾರ ವರದಿಯಾಗಿತ್ತು.

- Advertisement -


ಇದೀಗ ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್ ಗೆ ಯಾವುದೇ ನೋಟಿಸ್ ಕೊಟ್ಟಿಲ್ಲ ಎಂದು ಆಹಾರ ಇಲಾಖೆ ಆಯುಕ್ತ ಶ್ರೀನಿವಾಸ್ ಹೇಳಿದ್ದಾರೆ.


ಪ್ರಕರಣ ಬಗ್ಗೆ ಮಾಹಿತಿ ಸಂಗ್ರಹಿಸಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದ್ಯ 12 ಜನರಿಗೆ ಮಾಂಸ ಮಾರಾಟದ ಲೈಸೆನ್ಸ್ ಕೊಟ್ಟಿದ್ದೇವೆ. ಅವರನ್ನ ಭೇಟಿ ನೀಡಿ ಮಾಹಿತಿ ನೀಡುವುದಕ್ಕೆ ಹೇಳಿದ್ದೇವೆ. ಒಂದು ವೇಳೆ ಇಂದು ಆ 12 ಜನ ಹಾಜರಾಗದಿದ್ದರೆ ನೋಟಿಸ್ ಕೊಡುತ್ತೇವೆ. ವಿಚಾರಣೆಗೆ ಬಾರದಿದ್ದರೆ 12 ಜನರ ಲೈಸೆನ್ಸ್ ರದ್ದು ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಇದೀಗ ಕಾಟನ್ ಪೇಟೆ ಠಾಣೆಯಲ್ಲಿ ಪ್ರತ್ಯೇಕವಾಗಿ 3 ಎಫ್ ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಕ್ರಮವಾಗಿ ಮಾಂಸ ಮಾರಾಟದ ಬಗ್ಗೆ, ಗುಂಪುಗೂಡಿ ಗಲಾಟೆ ಮಾಡಿದ್ದ ಆರೊಪದಡಿ ಮತ್ತು ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದ ಮೇಲೆ ಕೊಲೆ ಸಹಿತ ಹಲವು ಪ್ರಕರಣಗಳ ಆರೋಪಿ ಪುನೀತ್ ಕೆರೆಹಳ್ಳಿ ಹಾಗೂ ಸಹಚರರ ವಿರುದ್ಧ ಮೂರನೇ ಎಫ್ ಐಆರ್ ದಾಖಲಾಗಿದೆ.

- Advertisement -


ಸದ್ಯ ಮೇಲ್ನೋಟಕ್ಕೆ ನಾಯಿ ಮಾಂಸ ಎಂದು ಕಂಡುಬಂದಿಲ್ಲ. ಹೀಗಾಗಿ ಸ್ಯಾಂಪಲ್ಗಳನ್ನ ಲ್ಯಾಬ್ಗೆ ಕಳಿಸಿದ್ದೇವೆ. ರಿಪೋರ್ಟ್ ಬಂದ ಮೇಲೆ ಖಂಡಿತ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.



Join Whatsapp