ನವದೆಹಲಿ: ಕೋಚಿಂಗ್ ಸೆಂಟರ್ ನಲ್ಲಿ ಐಎಎಸ್ ಆಕಾಂಕ್ಷಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಚಿಂಗ್ ಸೆಂಟರ್‌ನ ಮಾಲೀಕ ಹಾಗೂ ನಿರ್ವಾಹಕರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಕೋಚಿಂಗ್ ಸೆಂಟರ್ ಮಾಲೀಕ ಅಭಿಷೇಕ್ ಗುಪ್ತಾ ಮತ್ತು ನಿರ್ವಾಹಕ ದೇಶಪಾಲ್ ಸಿಂಗ್ ಅವರನ್ನು ಭಾನುವಾರ ದೆಹಲಿಯ ಮ್ಯಾಜಿಸ್ಟ್ರಿಯಲ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಇವರಿಬ್ಬರಿಗೂ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯವು ಆದೇಶ ಹೊರಡಿಸಿದೆ.
ದೆಹಲಿಯ ಓಲ್ಡ್ ರಾಜಿಂದರ್ ನಗರ ಪ್ರದೇಶದಲ್ಲಿರುವ ಐಎಎಸ್ ತರಬೇತಿ ಕೇಂದ್ರಕ್ಕೆ ಮಳೆ ನೀರು ನುಗ್ಗಿದ ಪರಿಣಾಮ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದರು.
ಕೋಚಿಂಗ್ ಸೆಂಟರ್‌ನಿಂದ ನೆಲಮಾಳಿಗೆಯಲ್ಲಿ ಪಾರ್ಕಿಂಗ್ ಮತ್ತು ಸ್ಟೋರ್ ರೂಮ್‌ಗಳಿಗಾಗಿ ಅನುಮತಿ ಪಡೆಯಲಾಗಿತ್ತು. 2 ನೆಲಮಾಳಿಗೆಗಳನ್ನ ಪಾರ್ಕಿಂಗ್ ಮತ್ತು ಸ್ಟೋರ್ ರೂಂಗಾಗಿ ಇದೇ ತಿಂಗಳ ಜುಲೈ 9ರಂದು ಎನ್‌ಒಸಿ ಪಡೆದುಕೊಂಡಿತ್ತು. ಆದರೆ ನಿಯಮಕ್ಕೆ ವಿರುದ್ಧವಾಗಿ ಗ್ರಂಥಾಲಯ ನಿರ್ಮಾಣ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.