►ಕೊಚ್ಚಿ ಹೋಯ್ತು 200ಕ್ಕೂ ಹೆಚ್ಚು ಮನೆಗಳು
ವಯನಾಡ್: ಕೇರಳದ ವಯನಾಡ್ ಜಿಲ್ಲೆಯಲ್ಲಿ ಕೇವಲ 4 ಗಂಟೆಗಳ ಅಂತರದಲ್ಲಿ ಸಂಭವಿಸಿದ ಮೂರು ಭೂ ಕುಸಿತಗಳಿಂದ ಇಲ್ಲಿಯವರೆಗೆ 54 ಮಂದಿ ಮೃತಪಟ್ಟಿದ್ದು, 200ಕ್ಕೂ ಹೆಚ್ಚು ಮನೆಗಳು ಕೊಚ್ಚಿ ಹೋಗಿದೆ.
ಮೆಪ್ಪಾಡಿ ಸಮೀಪದ ಗುಡ್ಡಗಾಡು ಪ್ರದೇಶಗಳಲ್ಲಿ ರಾತ್ರಿ 1 ಗಂಟೆಯ ಸುಮಾರಿಗೆ ಮೊದಲ ಭೂಕುಸಿತ ಸಂಭವಿಸಿದೆ. ನಂತರ ಬೆಳಗಿನ ಜಾವ 4.10ರ ಸುಮಾರಿಗೆ ಕಲ್ಪೆಟ್ಟಾದಲ್ಲಿ ಭೂಕುಸಿತ ಸಂಭವಿಸಿತು. ಪರಿಣಾಮ, ಹಲವು ಕುಟುಂಬಗಳು ಕಣ್ಮರೆಯಾಗಿವೆ. ಅಲ್ಲದೇ, ಮುಂಡಕ್ಕೈ, ಚೂರಲ್ಮಾಲಾ, ಅಟ್ಟಮಾಲ ಮತ್ತು ನೂಲ್ಪುಳನಲ್ಲೂ ಭೂಕುಸಿತವಾಗಿದೆ. ಇಲ್ಲಿನ ಗ್ರಾಮಗಳ ಸಂಪರ್ಕ ಕಡಿತಗೊಂಡಿವೆ. ಧಾರಾಕಾರ ಮಳೆ ಸುರಿಯುತ್ತಿದ್ದು, ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ ಎಂದು ವರದಿಯಾಗಿದೆ.
വയനാട് രക്ഷാപ്രവർത്തനം.@airnewsalerts @airnews_tvm
— All India Radio News Trivandrum (@airnews_tvm) July 30, 2024
AIR VIDEOS: Arunvincent, PTC Wayanad pic.twitter.com/TcISMAzxjv