ಒಲಿಂಪಿಕ್ಸ್’ನಲ್ಲಿ ಎರಡನೇ ಪದಕ: ಶೂಟಿಂಗ್’ನಲ್ಲಿ ಭಾರತಕ್ಕೆ ಕಂಚು

Prasthutha|

ಪ್ಯಾರಿಸ್: ಒಲಿಂಪಿಕ್ಸ್ ನಲ್ಲಿ ಭಾರತ ಎರಡನೇ ಪದಕವನ್ನು ಪಡೆದುಕೊಂಡಿದೆ. 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ವಿಭಾಗದಲ್ಲಿ ಮನು ಭಾಕರ್ ಮತ್ತು ಸರಬ್ಜೋತ್ ಸಿಂಗ್ ಕಂಚಿನ ಪದಕ ಗೆದ್ದಿದ್ದಾರೆ.

- Advertisement -


ಮಹಿಳೆಯರ ವೈಯಕ್ತಿಕ ವಿಭಾಗದಲ್ಲಿ ಮನು ಭಾಕರ್ ಕಂಚಿನ ಪದಕವನ್ನು ಗೆದ್ದುಕೊಂಡಿದ್ದರು. ಈಗ ಮಿಶ್ರ ವಿಭಾಗದಲ್ಲೂ ಮನುಭಾಕರ್ ಪದಕಕ್ಕೆ ಮುತ್ತಿಟ್ಟಿದ್ದಾರೆ. ಈ ಮೂಲಕ ಒಂದೇ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಎರಡು ಪದಕ ಪಡೆದ ಭಾರತದ ಮೊದಲ ಮಹಿಳಾ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.



Join Whatsapp