ಬೆಂಗಳೂರು: ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದ್ದು ಪ್ರವಾಹ, ಭೂಕುಸಿತದಂತಹ ಪರಿಸ್ಥಿತಿ ಎದುರಿಸಲು ಎಲ್ಲ ಜಿಲ್ಲಾಧಿಕಾರಿಗಳು ಕಟ್ಟೆಚ್ಚರ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಅಲ್ಲಲ್ಲಿ ಭೂಕುಸಿತದ ಪ್ರಕರಣಗಳು ವರದಿಯಾಗುತ್ತಿದ್ದು ಈ ಕುರಿತು ಸಹ ಜಿಲ್ಲಾಧಿಕಾರಿಗಳು ಎಚ್ಚರವಹಿಸುವಂತೆ ತಿಳಿಸಿದ್ದಾರೆ ಜಿಲ್ಲಾ ಉಸ್ತುವಾರಿ ಸಚಿವರು ಸಹ ಪ್ರವಾಹ ಪರಿಸ್ಥಿತಿಯ ನಿರ್ವಹಣೆಯ ಮೇಲ್ವಿಚಾರಣೆ ನಡೆಸುವಂತೆ ನಿರ್ದೇಶನ ನೀಡಿದ್ದಾರೆ.