ಇಸ್ಮಾಯಿಲ್ ಹನಿಯೆಹ್ ಹತ್ಯೆಗೆ ಪ್ರತ್ಯುತ್ತರ ನೀಡದೆ ಬಿಡುವುದಿಲ್ಲ: ಹಮಾಸ್ ಸಂದೇಶ

Prasthutha|

ಗಾಝಾ: ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್ ಹತ್ಯೆಗೆ ಪ್ರತ್ಯುತ್ತರ ನೀಡದೆ ಬಿಡುವುದಿಲ್ಲ ಎಂದು ಹಮಾಸ್ ರಾಜಕೀಯ ದಳದ ಸದಸ್ಯ ಮೂಸಾ ಅಬು ಮರ್ಝುಕ್ ಹೇಳಿದ್ದಾರೆ.

- Advertisement -


ಈ ಕುರಿತು ಪ್ರಕಟಣೆ ಬಿಡುಗಡೆ ಮಾಡಿರುವ ಅವರು, “ಇಸ್ಮಾಯಿಲ್ ಹನಿಯೆಹ್ ಅವರ ಹತ್ಯೆ ಹೇಡಿತನದ್ದಾಗಿದ್ದು, ಅದಕ್ಕೆ ಪ್ರತ್ಯುತ್ತರ ನೀಡದೆ ಬಿಡುವುದಿಲ್ಲ” ಎಂದು ಎಚ್ಚರಿಸಿದ್ದಾರೆ.


ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಹಮಾಸ್ ರಾಜಕೀಯ ನಾಯಕ ಇಸ್ಮಾಯಿಲ್ ಹನಿಯೆಹ್ ಹತ್ಯೆಯಾಗಿದ್ದಾರೆ ಎಂದು ಬುಧವಾರ ಹಮಾಸ್ ಪ್ರಕಟಿಸಿದೆ.

- Advertisement -


ಅಕ್ಟೋಬರ್ 7ರ ದಾಳಿಯ ನಂತರ ಇಸ್ಮಾಯಿಲ್ ಹನಿಯೆಹ್ ಅವರನ್ನು ಕೊಂದು ಹಮಾಸ್ ಗುಂಪನ್ನು ನಾಶಮಾಡುವುದಾಗಿ ಇಸ್ರೇಲ್ ಪ್ರತಿಜ್ಞೆ ಮಾಡಿತ್ತು. ಆದ್ದರಿಂದ ಹತ್ಯೆ ನಡೆದಿದೆ ಎನ್ನಲಾಗಿದೆ.



Join Whatsapp