ಬಿಜೆಪಿ ಪಾದಯಾತ್ರೆಯಲ್ಲಿ ಭಾಗಿಯಾಗಲು ಷರತ್ತು ವಿಧಿಸಿದ ಕುಮಾರಸ್ವಾಮಿ

Prasthutha|

ಬೆಂಗಳೂರು: ಮುಡಾ ಅಕ್ರಮ ಖಂಡಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ಹಮ್ಮಿಕೊಂಡಿದ್ದು, ಪಾದಯಾತ್ರೆಯಲ್ಲಿ ಜೆಡಿಎಸ್ ಭಾಗಿಯಾಗಲು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಷರತ್ತು ಹಾಕಿದ್ದಾರೆ ಎಂದು ತಿಳಿದುಬಂದಿದೆ.

- Advertisement -


ಆಗಸ್ಟ್ 3ರಿಂದ ಬಿಜೆಪಿ-ಜೆಡಿಎಸ್ ಪಾದಯಾತ್ರೆ ಆರಂಭವಾಗಲಿದೆ ಎಂದು ಘೋಷಣೆಯಾಗಿದೆ. ಆದರೆ ಪಾದಯಾತ್ರೆ ಬಗ್ಗೆ ಜೆಡಿಎಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಪಾದಯಾತ್ರೆ ಮುಂದೂಡಿಕೆಯಾಗಲಿದೆ ಎನ್ನಲಾಗಿತ್ತು. ಆದರೆ ಬಿಜೆಪಿ ನಾಯಕರು ನಿಗದಿಯಂತೆ ಪಾದಯಾತ್ರೆ ನಡೆಸಲು ಮುಂದಾಗಿದ್ದಾರೆ. ಜೆಡಿಎಸ್ ನಾಯಕರ ಮನವೊಲಿಕೆ ಯತ್ನ ನಡೆಸಿದ್ದಾರೆ.


ಪಾದಯಾತ್ರೆಯಲ್ಲಿ ಪ್ರೀತಂ ಗೌಡ ಭಾಗಿಯಾಗಬಾರದು. ಪ್ರೀತಂ ಗೌಡ ಪಾದಯಾತ್ರೆಯಲ್ಲಿ ಇರದಿದ್ದರೆ ಮಾತ್ರ ಜೆಡಿಎಸ್ ಭಾಗಿಯಾಗಲಿದೆ ಎಂದು ಹೇಳಿದ್ದಾರೆ. ಈ ಮೂಲಕ ಬಿಜೆಪಿ ಹೈಕಮಾಂಡ್ ಗೆ ಜೆಡಿಎಸ್ ಖಡಕ್ ಸಂದೇಶ ರವಾನಿಸಿದೆ.



Join Whatsapp