ಬಿಜೆಪಿ-ಜೆಡಿಎಸ್ ಪಾದಯಾತ್ರೆ ಆ.3ರಿಂದ ಆರಂಭ

Prasthutha|

►ಕುಮಾರಸ್ವಾಮಿ ವಾರ್ನಿಂಗ್ ಗೆ ಪ್ರೀತಂಗೌಡರನ್ನು ಹೊರಗಿಟ್ಟ ಬಿಜೆಪಿ

- Advertisement -


ನವದೆಹಲಿ: ವಾಲ್ಮೀಕಿ ಮತ್ತು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಆ.3ರಿಂದ ಬಿಜೆಪಿ-ಜೆಡಿಎಸ್ ಮೈತ್ರಿ ಪಾದಯಾತ್ರೆ ಆರಂಭವಾಗಲಿದೆ. ಇದರಲ್ಲಿ ಹಾಸನ ಮಾಜಿ ಶಾಸಕ ಪ್ರೀತಂಗೌಡ ಪಾತ್ರವೂ ಇಲ್ಲ, ಮಹತ್ವವೂ ಇಲ್ಲ ಎಂದು ಕರ್ನಾಟಕ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ಅಗರ್ವಾಲ್ ಮಾಹಿತಿ ನೀಡಿದರು.


ಈ ಬಗ್ಗೆ ದೆಹಲಿಯಲ್ಲಿಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಉಸ್ತುವಾರಿ ರಾಧಾಮೋಹನ್ ದಾಸ್, ಬಿವೈ ವಿಜಯೇಂದ್ರ ಜಂಟಿ ಸದ್ದಿಗೋಷ್ಠಿ ನಡೆಸಿ, ಬೆಂಗಳೂರು ಟು ಮೈಸೂರು ಪಾದಯಾತ್ರೆ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದಾರೆ.

- Advertisement -


ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಕಾರಣಕ್ಕಾಗಿ ಕೆಂಡಾಮಂಡಲರಾಗಿದ್ದ ಕುಮಾರಸ್ವಾಮಿ, ನಮ್ಮ ಕುಟುಂಬದಲ್ಲಿ ವಿಷ ಹಾಕಿದವನ ನೇತೃತ್ವದಲ್ಲಿ ಪಾದಯಾತ್ರೆಗೆ ನಮ್ಮ ಬೆಂಬಲವಿಲ್ಲ ಎಂದು ಖಾರವಾಗಿ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್ ಜಂಟಿಯಾಗಿ ನಡೆಸಬೇಕಿದ್ದ ಮುಡಾ ಸೈಟ್ ಕುರಿತಾದ ಮೈಸೂರು ಚಲೋ ರದ್ದಾಗಬಹುದಾದ ಸನ್ನಿವೇಶ ಸೃಷ್ಟಿಯಾಗಿತ್ತು. ಇದೀಗ ಅಂತಿಮವಾಗಿ ವಿಜಯೇಂದ್ರ, ರಾಧಾಮೋಹನ್ ದಾಸ್, ಪ್ರಲ್ಹಾದ್ ಜೋಶಿ ಇಂದು(ಆಗಸ್ಟ್ 01) ಸಂಸತ್ ಭವನದಲ್ಲಿ ಕುಮಾರಸ್ವಾಮಿ ಜೊತೆ ಸಂಧಾನ ಸಭೆ ಮಾಡಿ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದು, ಕುಮಾರಸ್ವಾಮಿ ಅವರಿಂದಲೇ ಈ ಪಾದಯಾತ್ರೆಗೆ ಚಾಲನೆ ಕೊಡಿಸಲು ತೀರ್ಮಾನಿಸಿದ್ದಾರೆ.


ನವದೆಹಲಿಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಕರ್ನಾಟಕ ಉಸ್ತುವಾರಿ ರಾಧಾ ಮೋಹನ್ ಅಗರ್ ವಾಲ್ ಅವರು, ರಾಜ್ಯದ ಎಲ್ಲ ಬಿಜೆಪಿ ಹಾಗೂ ಜೆಡಿಎಸ್ ನಾಯಕರು, ಶಾಸಕರು, ಸಂಸದರು ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ ಆಗಿರುವ ಬಗ್ಗೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಸದನದಲ್ಲಿ ಒಪ್ಪಿಕೊಂಡಿದ್ದಾರೆ. 6 ಕೋಟಿ ಕನ್ನಡಿಗರ ಪರವಾಗಿ ನಾವು ಮೈತ್ರಿ ಕೂಟ ಧ್ವನಿ ಎತ್ತುತ್ತಿದ್ದೇವೆ. ಆಗಸ್ಟ್ 3ರ ಶನಿವಾರದಿಂದ ಪಾದಯಾತ್ರೆಯನ್ನು ಬೆಂಗಳೂರಿನ ನೈಸ್ ರಸ್ತೆ ಜಂಕ್ಷನ್ನಿಂದ ಆರಂಭಿಸಲಾಗುತ್ತದೆ. ಜೆಡಿಎಸ್, ಬಿಜೆಪಿ ಪಕ್ಷಗಳು ಪಾದಯಾತ್ರೆ ಉಸ್ತುವಾರಿ ಹೊತ್ತುಕೊಳ್ಳಲಿವೆ. ಇನ್ನು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಪಾದಯಾತ್ರೆಯಲ್ಲಿ ಬಿಜೆಪಿಯ ಮಾಜಿ ಶಾಸಕ ಪ್ರೀತಂ ಗೌಡ ಅವರ ನೇತೃತ್ವ ಇರುವುದಿಲ್ಲ. ಮುಖ್ಯವಾಗಿ ಪಾದಯಾತ್ರೆಲ್ಲಿ ಪ್ರೀತಂಗೌಡ ಅವರ ಪಾತ್ರವೂ ಇಲ್ಲ, ಮಹತ್ವವೂ ಇಲ್ಲ ಎಂದು ಹೇಳಿದರು.



Join Whatsapp