ಮರಕ್ಕೆ ಕಾರು ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

Prasthutha|

ಕೋಲಾರ: ಆಡಿ ಕಾರು ಮರಕ್ಕೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಲಾರ ಹೊರವಲಯದ ಸಹಕಾರ ನಗರದ ಬಳಿ ನಡೆದಿದೆ. ಹಾಸನ ಮೂಲದ ಹರ್ಷವರ್ಧನ್, ಬಳ್ಳಾರಿ ಮೂಲದ ಬಸವರಾಜ್, ಕೋಲಾರ ಜಿಲ್ಲೆ ಬಂಗಾರಪೇಟೆಯ ನಿಶ್ಚಲ್ ಮೃತರು.

ಅದೃಷ್ಟವಶಾತ್ ಬಂಗಾರಪೇಟೆಯ ಸಾಯಿ ಗಗನ್ ದುರಂತದಲ್ಲಿ ಬಚಾವ್ ಆಗಿದ್ದಾರೆ.

- Advertisement -


ಮೃತಪಟ್ಟ ಮೂವರು ರೇವಾ ಯೂನಿವರ್ಸಿಟಿ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸಾಯಿಗಗನ್ ಸೋದರಿ ಮದುವೆ ಆಮಂತ್ರಣ ಹಂಚಲು ಸ್ನೇಹಿತರೆಲ್ಲ ಕಾರಿನಲ್ಲಿ ಹೊರಟಿದ್ದಾಗ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



Join Whatsapp