ಕಾರವಾರ; ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು: ಟನೆಲ್ ಬಂದ್ ಮಾಡಿದ ಪೊಲೀಸರು

Prasthutha|

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ರಾಷ್ಟ್ರೀಯ ಹೆದ್ದಾರಿ 66ರ ಕಾರವಾರದ ಸುರಂಗ ಮಾರ್ಗದಲ್ಲಿ ಕಲ್ಲು ಕುಸಿದಿದ್ದು, ಪೊಲೀಸರು ಸಂಚಾರ ಬಂದ್ ಮಾಡಿದ್ದಾರೆ.

- Advertisement -

ಸ್ಥಳಕ್ಕೆ ಕಾರವಾರ ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದು, ಐಆರ್ ಬಿ ಕಾರ್ಮಿಕರಿಂದ ಹೆದ್ದಾರಿಯಲ್ಲಿ ಬಿದ್ದ ಕಲ್ಲು ಮಣ್ಣು ತೆರವು ಮಾಡಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಬಿಣಗಾ ಕಾರವಾರ ಟನೆಲ್ ಬಂದ್ ಮಾಡಿದ್ದಾರೆ. ಬಿಣಗಾದಿಂದ ಬೈತಕೋಲ್ ಮಾರ್ಗದಲ್ಲಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.



Join Whatsapp