ಬೆಂಗಳೂರು ಸಿಸಿಬಿ ಪೊಲೀಸ್ ಇನ್ಸ್’ಪೆಕ್ಟರ್ ತಿಮ್ಮೇಗೌಡ ಆತ್ಮಹತ್ಯೆ

Prasthutha|

ಬೆಂಗಳೂರು: ಪಿಎಸ್ ಐ ಪರಶುರಾಮ್ ಸಾವು ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಸಂದರ್ಭದಲ್ಲೇ ಬೆಂಗಳೂರು ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ತಿಮ್ಮೇಗೌಡ ಆತ್ಮಹತ್ಯೆಗೆ ಶರಣಾಗಿದ್ದಾರೆ.

- Advertisement -


ರಾಮನಗರ ಜಿಲ್ಲೆಯ ಬಿಡದಿ ಬಳಿ, ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಿಮ್ಮೇಗೌಡ ಮರವೊಂದಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಬೆಂಗಳೂರು ಸಿಸಿಬಿ ಆರ್ಥಿಕ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ತಿಮ್ಮೇಗೌಡ ಆತ್ಮಹತ್ಯೆಗೆ ಕಾರಣ ಏನೆಂಬುದು ಇನ್ನೂ ಗೊತ್ತಾಗಿಲ್ಲ. ಸದ್ಯ ಬಿಡದಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.



Join Whatsapp