ಕುಮಾರಸ್ವಾಮಿ ತನ್ನ ಸಹೋದರನ ಆಸ್ತಿ ಲೆಕ್ಕ ಮೊದಲು ನೀಡಲಿ: ಡಿಕೆಶಿ

Prasthutha|

ಬೆಂಗಳೂರು: ‘ನನ್ನ ಕುಟುಂಬದ ಆಸ್ತಿ ಲೆಕ್ಕಾಚಾರ ಕೇಳುತ್ತಿದ್ದೀಯಾ, ಎಲ್ಲದಕ್ಕೂ ಲೆಕ್ಕ ಕೊಡುತ್ತೇನೆ. ಇದಕ್ಕೂ ಮೊದಲು ನಿನ್ನ ಸಹೋದರನ ಆಸ್ತಿ ಲೆಕ್ಕ ನೀಡು‘ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಸವಾಲೆಸೆದರು.

- Advertisement -


ಸುದ್ದಿಗಾರರ ಜೊತೆ ಮಾತನಾಡಿದ ಅವರು “ನಿನ್ನ ಅಧಿಕಾರವಧಿಯಲ್ಲಿ ನಿನ್ನ ಸಹೋದರ ಹೇಗೆ ಅಧಿಕಾರ ದುರುಪಯೋಗ ಮಾಡಿಕೊಂಡ ಎಂಬುದಕ್ಕೆ ಮೊದಲು ಲೆಕ್ಕಾಚಾರ ಹಾಕೋಣ. ಆನಂತರ ನನ್ನದು ಕೊಡುತ್ತೇನೆ. ಇದರಲ್ಲಿ ಯಾವುದೇ ಮುಚ್ಚುಮರೆಯಿಲ್ಲ” ಎಂದು ಏಕವಚನದಲ್ಲಿ ತಿರುಗೇಟು ನೀಡಿದರು.


“ಕುಮಾರಸ್ವಾಮಿ ನನ್ನ ಪ್ರಶ್ನೆ ಮಾಡುತ್ತಾನೆ. ಪ್ರಜಾಪ್ರಭುತ್ವದಲ್ಲಿ ಪ್ರಶ್ನಿಸುವ ಹಕ್ಕು ಎಲ್ಲರಿಗೂ ಇದೇ. ಆದರೆ ಅವರ ಸಹೋದರನ ಆಸ್ತಿ ಬಗ್ಗೆ ಮೊದಲು ಉತ್ತರ ನೀಡಲಿ. ಜೆಡಿಎಸ್, ಬಿಜೆಪಿ ಹಗರಣಗಳಿಗೆ ಉತ್ತರ ಕೊಡಿ ಎಂದು ಕೇಳಿದರೂ ಇದುವರೆಗೂ ಉತ್ತರ ಕೊಟ್ಟಿಲ್ಲ’ ಎಂದರು.



Join Whatsapp