ರಾಮನಗರ: ಡಿಸಿಎಂ ಡಿಕೆ ಶಿವಕುಮಾರ್ ಗೊಡ್ಡು ಬೆದರಿಕೆಗಳಿಗೆಲ್ಲ ಬಗ್ಗುವುದಿಲ್ಲ. ನನ್ನ ಬಗ್ಗೆ ಅದೇನು ಬಿಚ್ಚಿಡುತ್ತಾರೋ ಬಿಚ್ಚಿಡಲಿ ಎಂದು ಕೇಂದ್ರ ಸಚಿವ ಹೆಚ್’ಡಿ ಕುಮಾರಸ್ವಾಮಿ ಸವಾಲು ಹಾಕಿದರು.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾದಯಾತ್ರೆಗೆ ಆಗ್ರಹಿಸಿ ಬಿಜೆಪಿ ಜೆಡಿಎಸ್ ನಡೆಸುತ್ತಿರುವ ಪಾದಯಾತ್ರೆಯಲ್ಲಿ ಭಾಗವಹಿಸಿ ಚನ್ನಪಟ್ಟಣ ತಾಲೂಕಿನ ಕೆಂಗಲ್ ನಲ್ಲಿ ಮಾತನಾಡಿದ ಅವರು, ನನ್ನ ಬಗ್ಗೆ ಏನು ಬಿಚ್ಚಿಡುತ್ತಾರೋ ಬಿಚ್ಚಿಡಲಿ. ಅಲ್ಲಿ ಯಾದಗಿರಿಯಲ್ಲಿ ಪಿಎಸ್ಐ ಪತ್ನಿ ಕಣ್ಣೀರು ಇಡುತ್ತಿದ್ದಾಳೆ. ಮೃತ ಪಿಎಸ್ಐ ಪತ್ನಿಗೆ ನ್ಯಾಯಕೊಡಿಸಲು ಈ ಸರ್ಕಾರಕ್ಕೆ ಆಗಿಲ್ಲ. ಮೊದಲು ಈ ಸರ್ಕಾರ ಆಕೆಗೆ ನ್ಯಾಯ ಒದಗಿಸುವ ಕೆಲಸ ಮಾಡಲಿ ಎಂದು ಕುಮಾರಸ್ವಾಮಿ ಹೇಳಿದರು.