ಮಂಗಳೂರು: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕಾ ದೋಣಿ ಬೆಂಕಿಗಾಹುತಿ

Prasthutha|

ಮಂಗಳೂರು: ಅರಬ್ಬಿ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದ ಸಫಾವಿ ಎಂಬ ಟ್ರಾಲ್ ಬೋಟ್ ಗೆ ಸೋಮವಾರ ನಸುಕಿನಲ್ಲಿ ಬೆಂಕಿ ಹೊತ್ತಿಕೊಂಡಿದೆ. ದೋಣಿಯಲ್ಲಿದ್ದ 10 ಮೀನುಗಾರರನ್ನು ಇನ್ನೊಂದು ದೋಣಿಯ ಮೀನುಗಾರರು ರಕ್ಷಿಸಿದ್ದಾರೆ.

- Advertisement -


ಮಂಗಳೂರು ಧಕ್ಕೆಯಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಹುಸೈನ್ ಎಂಬವರ ಮಾಲಕತ್ವದ ಬೋಟ್ ಬೆಂಕಿಗಾಹುತಿಯಾಗಿದೆ. ಇಂದು ಬೆಳಗ್ಗಿನ ಜಾವ ಸುಮಾರು 3 ರಿಂದ 4 ಗಂಟೆಯ ವೇಳೆಗೆ ಬೋಟ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಬೋಟ್ ನಲ್ಲಿದ್ದ ಮೀನುಗಾರರನ್ನು ಇನ್ನೊಂದು ಬೋಟ್ ನಲ್ಲಿದ್ದವರು ರಕ್ಷಿಸಿದ್ದು, ಅವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.



Join Whatsapp