ಮಂಡ್ಯ: ಬಿಜೆಪಿ ಮತ್ತು ಜೆಡಿಎಸ್ ನವರು ಅವರೇ ಮಾಡಿರುವ ಬ್ರಹ್ಮಾಂಡ ಭ್ರಷ್ಟಾಚಾರವನ್ನು ವಿಮರ್ಶೆ ಮಾಡಿಕೊಳ್ಳಲು ಪಾದಯಾತ್ರೆ ನಡೆಸುತ್ತಿದ್ದಾರೆ. ನಿಮ್ಮದು ಪಾದಯಾತ್ರೆಯಲ್ಲ, ಪಾಪ ವಿಮೋಚನಾ ಯಾತ್ರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಟುವಾಗಿ ಟೀಕಿಸಿದರು.
ಜನಾಂದೋಲನ ಸಮಾವೇಶ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ಬೆಲೆ ಏರಿಕೆ ಮತ್ತು ಆರ್ಥಿಕ ಅಸಮಾನತೆ ವಿರುದ್ಧ ರಾಹುಲ್ಗಾಂಧಿಯವರು ‘ಭಾರತ್ ಜೋಡೊ’ ಪಾದಯಾತ್ರೆ ಮಾಡಿದರು. ನಾವು ಕಾವೇರಿ ನೀರಿಗಾಗಿ ಮತ್ತು ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಮಾಡಿದೆವು. ಬಿಜೆಪಿ ಮತ್ತು ಜೆಡಿಎಸ್ನವರು, ಅವರೇ ಮಾಡಿರುವ ಬ್ರಹ್ಮಾಂಡ ಭ್ರಷ್ಟಾಚಾರವನ್ನು ವಿಮರ್ಶೆ ಮಾಡಿಕೊಳ್ಳಲು ಪಾದಯಾತ್ರೆ ನಡೆಸುತ್ತಿದ್ದಾರೆ. ನಿಮ್ಮದು ಪಾದಯಾತ್ರೆಯಲ್ಲ, ಪಾಪ ವಿಮೋಚನಾ ಯಾತ್ರೆ’ ಎಂದರು.
ಮೈತ್ರಿ ಪಕ್ಷಗಳು ಪಾದಯಾತ್ರೆ ಮಾಡುತ್ತಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನನ್ನ ವಿರುದ್ಧ ಅಲ್ಲ. ಕಾಂಗ್ರೆಸ್ ಪಕ್ಷವನ್ನು 136 ಸ್ಥಾನಗಳಲ್ಲಿ ಗೆಲ್ಲಿಸಿದ ಬಡ ಜನರ ವಿರುದ್ಧ. ಕಾಂಗ್ರೆಸ್ ಸರ್ಕಾರ ಕಿತ್ತೊಗೆಯಲು ಕುಮಾರಣ್ಣ ಮತ್ತು ಯಡಿಯೂರಪ್ಪನವರೇ ನಿಮ್ಮ ಹಣೆಯಲ್ಲೇ ಬರೆದಿಲ್ಲ. ಅಶೋಕ್ ನಿನ್ನ ಕೈಯಲ್ಲಿ ಧಮ್ ಇಲ್ಲ. ನಿಮ್ಮ ಪಾದಯಾತ್ರೆಗೂ ಧಮ್ ಇಲ್ಲ ಎಂದರು.