ಕಾರವಾರ: ಕಾಳಿನದಿಯ ಸೇತುವೆ ಕುಸಿತಕ್ಕೆ ಕೇಂದ್ರ ಸರ್ಕಾರವೇ ಹೊಣೆ ಹೊರಬೇಕು. ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ಸಾಕಷ್ಟು ಅಧ್ವಾನ ನಡೆದರೂ ಅವರು (ಕೇಂದ್ರ ಸರ್ಕಾರ) ಮೌನವಾಗಿರುವುದು ಅಚ್ಚರಿ ಮೂಡಿಸುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹೇಳಿದರು.
ಸೇತುವೆ ಕುಸಿತವಾದ ಸ್ಥಳಕ್ಕೆ ಭೇಟಿ ನೀಡಿದ ಅವರು ಮಾಧ್ಯಮದವರ ಜತೆ ಮಾತನಾಡಿದರು.
‘ರಾಷ್ಟ್ರೀಯ ಹೆದ್ದಾರಿ ಯೋಜನೆ ಕೇಂದ್ರ ಸರ್ಕಾರಕ್ಕೆ ಸೇರಿರುವುದರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಐ.ಆರ್.ಬಿ ಕಂಪನಿ ಮೇಲೆ ಕೇಂದ್ರದ ಹಿಡಿತವಿದೆ. ಕಂಪನಿ ಈವರೆಗೆ ಹಲವು ಅವೈಜ್ಞಾನಿಕ ಕೆಲಸ ಮಾಡಿದ್ದರೂ ಅವರ ಮೇಲೆ ಕ್ರಮ ಕೈಗೊಳ್ಳಲು ಸಾಧ್ಯವಾಗಿಲ್ಲ’ ಎಂದರು.