ಆರೋಗ್ಯದಲ್ಲಿ ಏರುಪೇರು: ವಿನೇಶ್ ಫೋಗಟ್ ಆಸ್ಪತ್ರೆಗೆ ದಾಖಲು

Prasthutha|

- Advertisement -

ಪ್ಯಾರಿಸ್: 50 ಕೆಜಿ ವಿಭಾಗದ ಫೈನಲ್‌ಗೆ ತಲುಪಿದ್ದ ವಿನೇಶ್ ಫೋಗಟ್, ಪ್ರಶಸ್ತಿ ಪಂದ್ಯಕ್ಕೂ ಮುನ್ನ 100 ಗ್ರಾಂ ಹೆಚ್ಚು ತೂಕ ಹೊಂದಿದ್ದರಿಂದ ಅವರನ್ನು ಕ್ರೀಡಾಕೂಟದಿಂದ ಅನರ್ಹಗೊಳಿಸಲಾಗಿದೆ.

ಈ ನಡುವೆ ವಿನೇಶ್ ಫೋಗಟ್ ಅವರ ಆರೋಗ್ಯ ಹದಗೆಟ್ಟಿದ್ದು, ಅವರು ಪ್ರಸ್ತುತ ಪ್ಯಾರಿಸ್​ನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.

- Advertisement -

ನಿರ್ಜಲೀಕರಣದಿಂದಾಗಿ ವಿನೇಶ್ ಅವರನ್ನು ಕ್ಲಿನಿಕ್‌ಗೆ ಕರೆದೊಯ್ಯಲಾಗಿದೆ. ವಿನೇಶ್ ಕ್ಲಿನಿಕ್‌ಗೆ ದಾಖಲಾಗಿರುವ ಸುದ್ದಿ ತಿಳಿದ ನಂತರ ಪಿಟಿ ಉಷಾ ಮತ್ತು ಭಾರತೀಯ ಅಧಿಕಾರಿಗಳ ತಂಡ ಅವರನ್ನು ಭೇಟಿ ಮಾಡಲು ಅಲ್ಲಿಗೆ ತೆರಳಿದೆ ಎಂಬ ಮಾಹಿತಿ ತಿಳಿದುಬಂದಿದೆ.



Join Whatsapp