ಶಿರಾಡಿಘಾಟ್’ನಲ್ಲಿ ಎಲ್ಲಾ ವಾಹನಗಳಿಗೆ ಸಂಚಾರಕ್ಕೆ ಅವಕಾಶ

Prasthutha|

ಹಾಸನ: ಹಲವು ದಿನಗಳ ಆತಂಕದ ಬಳಿಕ ಶಿರಾಡಿಘಾಟ್ ಸಂಚಾರಕ್ಕೆ ಮುಕ್ತವಾಗಿದ್ದು, ದಿನದ 24 ಗಂಟೆಯೂ ಎಲ್ಲಾ ವಾಹನಗಳ ಓಡಾಟಕ್ಕೆ ಅವಕಾಶ ಕಲ್ಪಿಸಲಾಗಿದೆ.

- Advertisement -


ಮಲೆನಾಡಿನಲ್ಲಿ ಮಳೆ ಕಡಿಮೆಯಾದ ಹಿನ್ನೆಲೆ ವಾಹನಗಳ ಓಡಾಟಕ್ಕೆ ಜಿಲ್ಲಾಡಳಿತ ಅವಕಾಶ ಮಾಡಿದೆ.


ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿ ಹಲವು ಭಾರಿ ಗುಡ್ಡ ಕುಸಿದಿದ್ದ ಸ್ಥಳದಲ್ಲಿ ಮಣ್ಣನ್ನು ತೆರವು ಮಾಡಿ ಆತಂಕ ನಿವಾರಣೆ ಮಾಡಲಾಗಿದೆ. ಈ ಹಿನ್ನಲೆ ವಾಹನಗಳು ಸಂಚರಿಸಲು ಅನುವು ಮಾಡಿಕೊಡಲಾಗಿದೆ.

- Advertisement -

ಮಂಗಳೂರು- ಬೆಂಗಳೂರು ರೈಲು ಮಾರ್ಗದ ಎಡಕುಮೇರಿ- ಕಡಗರವಳ್ಳಿ ನಡುವಿನಲ್ಲಿ ಉಂಟಾಗಿರುವ ಭೂಕುಸಿತದಿಂದ ಹಾನಿಗೊಂಡಿರುವ ರೈಲು ಮಾರ್ಗದ ದುರಸ್ತಿ ಕಾರ್ಯ ಮುಂದುವರಿದಿದೆ.

ಈಗಾಗಲೇ ರೈಲು ಮಾರ್ಗದ ದುರಸ್ತಿ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಅಂತಿಮ ಹಂತದ ಕಾಮಗಾರಿಗಳು ನಡೆಯುತ್ತಿವೆ.



Join Whatsapp