ಮಂಗಳೂರು : ಮಂಗಳೂರಿನ ಫರಂಗಿಪೇಟೆಯಲ್ಲಿನ ಮಸೀದಿಗೆ ನುಗ್ಗಿ ಧರ್ಮ ಗುರುವಿಗೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆಯನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಬಂಟ್ವಾಳ ತಾಲೂಕು ಅಧ್ಯಕ್ಷ ಸಲೀಂ ಫರಂಗಿಪೇಟೆ ಖಂಡಿಸಿದ್ದಾರೆ. ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುತ್ತಿರುವ ಧರ್ಮ ಗುರುವಿನ ಆರೋಗ್ಯ ವಿಚಾರಿಸಿದ ಅವರು, ಇತ್ತೀಚಿನ ದಿನಗಳಲ್ಲಿ ಮಸೀದಿ, ದೇವಾಲಯ, ಚರ್ಚ್ ಸಹಿತ ಧಾರ್ಮಿಕ ಕ್ಷೇತ್ರಗಳನ್ನು ಗುರಿಯಾಗಿಸಿ ದುಷ್ಕರ್ಮಿಗಳು ಸಮಾಜದ ಶಾಂತಿ ಕದಡಲು ಪ್ರಯತ್ನಿಸುತ್ತಿದ್ದಾರೆ. ಇಂತಹ ಪ್ರಕರಣಗಳನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರಗಿಸಬೇಕು. ಹಾಗೆಯೇ ಮುಂದಿನ ರಮಝನ್ ತಿಂಗಳಲ್ಲಿ ಪ್ರತೀ ಮಸೀದಿಗೆ ಪೊಲೀಸ್ ಭದ್ರತೆ ಒದಗಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.