ಪಾಕ್‌ ಡ್ರೋನ್‌ಗಳನ್ನು ಹೊಡೆದುರುಳಿಸಿದ ಭಾರತೀಯ ಸೇನೆ

- Advertisement -

ನವದೆಹಲಿ: ಪಶ್ಚಿಮ ಗಡಿಗಳಲ್ಲಿ ಪಾಕಿಸ್ತಾನದ ಡ್ರೋನ್ ದಾಳಿಯನ್ನು ವಿಫಲಗೊಳಿಸುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ಪಾಕಿಸ್ತಾನವು ಡ್ರೋನ್ ದಾಳಿ ಮತ್ತು ಯುದ್ಧಸಾಮಗ್ರಿಗಳೊಂದಿಗೆ ಪರಿಸ್ಥಿತಿಯನ್ನು ಉಲ್ಬಣಗೊಳಿಸುವುದನ್ನು ಮುಂದುವರೆಸಿದೆ ಎಂದು ರಕ್ಷಣಾ ಸಚಿವಾಲಯ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದೆ.

ಇಂದು (ಶನಿವಾರ) ಬೆಳಿಗ್ಗೆ 5 ಗಂಟೆ ಸುಮಾರಿಗೆ ಪಂಜಾಬ್‌ನ ಅಮೃತಸರದ ಹಲವಡೆ ಪಾಕಿಸ್ತಾನದ ಶಸ್ತ್ರಸಜ್ಜಿತ ಡ್ರೋನ್‌ಗಳು ಪತ್ತೆಯಾಗಿದ್ದು, ಅವುಗಳನ್ನು ನಮ್ಮ ವಾಯು ರಕ್ಷಣಾ ಘಟಕಗಳು ನಾಶಪಡಿಸಿವೆ ಎಂದು ರಕ್ಷಣಾ ಸಚಿವಾಲಯ ಮಾಹಿತಿ ನೀಡಿದೆ.

- Advertisement -

ಭಾರತದ ಸಾರ್ವಭೌಮತ್ವವನ್ನು ಉಲ್ಲಂಘಿಸುವ ಮತ್ತು ನಾಗರಿಕ ಜೀವಗಳಿಗೆ ಅಪಾಯವನ್ನುಂಟು ಮಾಡುವ ಪಾಕಿಸ್ತಾನದ ನಡೆ ಖಂಡನಾರ್ಹ ಎಂದು ರಕ್ಷಣಾ ಸಚಿವಾಲಯ ಎಚ್ಚರಿಕೆ ನೀಡಿದೆ.

- Advertisement -


Must Read

Related Articles