ಇಂಡೋ-ಬಾಂಗ್ಲಾ ಗಡಿ ಮೇಲ್ವಿಚಾರಣೆ, ಹಿಂದೂಗಳ ಸುರಕ್ಷತೆಗೆ ಸಮಿತಿ ರಚನೆ: ಅಮಿತ್ ಶಾ

Prasthutha|

ನವದೆಹಲಿ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆಗಳ ಹಿನ್ನೆಲೆ ಭಾರತ-ಬಾಂಗ್ಲಾದೇಶದ ಗಡಿಯಲ್ಲಿ ಸದ್ಯದ ಪರಿಸ್ಥಿತಿಯನ್ನು ಮೇಲ್ವಿಚಾರಣೆ ನಡೆಸಲು ಹಾಗೂ ಹಿಂದೂಗಳು ಸೇರಿದಂತೆ ಇತರ ಅಲ್ಪಸಂಖ್ಯಾತ ಸಮುದಾಯಗಳ ಸುರಕ್ಷತೆಗೆ ಕೇಂದ್ರ ಸರ್ಕಾರ ಸಮಿತಿ ರಚಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

- Advertisement -


ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಬಾಂಗ್ಲಾದೇಶದಲ್ಲಿ ವಾಸಿಸುತ್ತಿರುವ ಭಾರತೀಯ ಪ್ರಜೆಗಳು, ಹಿಂದೂಗಳು ಸೇರಿದಂತೆ ಇತರ ಅಲ್ಪಸಂಖ್ಯಾತ ಸಮುದಾಯಗಳ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಪೂರ್ವ ಕಮಾಂಡ್ನ ಗಡಿ ಭದ್ರತಾ ಪಡೆ ಎಡಿಜಿ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯು ಬಾಂಗ್ಲಾದೇಶದ ಅಧಿಕಾರಿಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದೆ’ ಎಂದು ತಿಳಿಸಿದ್ದಾರೆ.



Join Whatsapp