ಕೋಲ್ಕತ್ತ | ಆಸ್ಪತ್ರೆಯಲ್ಲೇ ಕಿರಿಯ ವೈದ್ಯೆಯ ಶವ ಪತ್ತೆ ಪ್ರಕರಣ: ಪ್ರತಿಭಟನೆ ಬೆನ್ನಲೇ ಓರ್ವನ ಬಂಧನ

Prasthutha|

ಕೋಲ್ಕತ್ತ: ಕೋಲ್ಕತ್ತಾದ ಸರ್ಕಾರಿ ಆರ್ ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯ ಶವ ಪತ್ತೆಯಾದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ಹೆಚ್ಚಾಗುತ್ತಿರುವ ಬೆನ್ನಲೇ ಸಂಜೋಯ್ ರಾಯ್ ಎಂದು ಗುರುತಿಸಲಾದ ವ್ಯಕ್ತಿಯನ್ನು ಪೊಲೀಸರು ಶನಿವಾರ (ಆಗಸ್ಟ್ 10) ರಂದು ಬಂಧಿಸಿದ್ದಾರೆ.

- Advertisement -


ವೈದ್ಯೆ ಮೇಲಿನ ಲೈಂಗಿನ ಕಿರುಕುಳ, ಹತ್ಯೆ ಪ್ರಕರಣ ಸಂಬಂಧ ಸಾರ್ವಜನಿಕ ವಲಯದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ ಕೋಲ್ಕತ್ತದ ಸರ್ಕಾರಿ ಆಸ್ಪತ್ರೆಯ ಸೆಮಿನಾರ್ ಹಾಲ್ನಲ್ಲಿ ಮಹಿಳಾ ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿನಿಯ ಅರೆ ನಗ್ನ ಶವ ಪತ್ತೆಯಾಗಿತ್ತು. ಆಕೆಯ ದೇಹದ ಮೇಲೆ ಗಾಯದ ಗುರುತುಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಮೃತ ವೈದ್ಯೆಯು ಔಷಧ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿಯಾಗಿದ್ದಳು ಎಂದು ತಿಳಿದು ಬಂದಿದೆ.

- Advertisement -


ಆಸ್ಪತ್ರೆಯೊಳಗೆ ಮಗಳ ಮೇಲೆ ಅತ್ಯಾಚಾರ ಎಸಗಿ ಬಳಿಕ ಆಕೆಯನ್ನು ಕೊಲೆ ಮಾಡಲಾಗಿದೆ. ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಮೃತ ವೈದ್ಯೆಯ ತಂದೆ ಆರೋಪಿಸಿದ್ದಾರೆ.
ವೈದ್ಯೆಗೆ ಲೈಂಗಿಕ ಕಿರುಕುಳ ನೋಡಿ ಹತ್ಯೆ ಮಾಡಲಾಗಿದೆ ಎಂದು ಮರಣೋತ್ತರ ವರದಿಯಲ್ಲಿ ದೃಢಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.



Join Whatsapp